ಪುತ್ತೂರು: ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾಗಿ ಮರು ಆಯ್ಕೆಯಾದ ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಕೆ.ಸೀತಾರಾಮ ರೈ ಸವಣೂರು ಮತ್ತು ನಿರ್ದೇಶಕ ಚಿಕ್ಕಪ್ಪ ನಾಯಕ್ ಅರಿಯಡ್ಕ ಹಾಗೂ ನಿರ್ದೇಶಕ ಸೀತಾರಾಮ ಬಿ. ಶೆಟ್ಟಿ ಮಂಗಳೂರು ಇವರು ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ.ಲಿ ಬೆಳ್ತಂಗಡಿ ಇದರ ನಿರ್ದೇಶಕರಾಗಿ ಮರು ಆಯ್ಕೆಗೊಂಡ ಈ ಸಂದರ್ಭದಲ್ಲಿ ಫೆ.3 ರಂದು ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಸಂಸ್ಥೆಯ ಪರವಾಗಿ ಅಭಿನಂದಿಸಿ, ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷ ಎನ್. ಸುಂದರ ರೈ ಸವಣೂರು, ನಿರ್ದೇಶಕರುಗಳಾದ ಬಿ ಮಹಾಬಲ ರೈ, ಬೋಳಂತೂರು, ಎಸ್.ಎಂ.ಬಾಪು ಸಾಹೇಬ್ ಸುಳ್ಯ, ಎನ್. ಜಯಪ್ರಕಾಶ್ ರೈ ಚೊಕ್ಕಾಡಿ, ಅಶ್ವಿನ್ ಎಲ್ ಶೆಟ್ಟಿ, ಸವಣೂರು, ವಿ.ವಿ.ನಾರಾಯಣ ಭಟ್ ನರಿಮೊಗರು, ಎನ್.ರಾಮಯ್ಯ ರೈ ತಿಂಗಳಾಡಿ, ಜೈರಾಜ್ ಭಂಡಾರಿ ನೋಣಾಲು, ಮಹಾದೇವ ಎಂ. ಮಂಗಳೂರು, ಶ್ರೀಮತಿ ಪೂರ್ಣಿಮಾ ಎಸ್. ಆಳ್ವ ಮಂಗಳೂರು, ಶ್ರೀಮತಿ ಯಮುನಾ ಎಸ್ ರೈ ಗುತ್ತುಪಾಲ್, ಮಹಾಪ್ರಬಂಧಕ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.