ಪುತ್ತೂರು: ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಅವರ ಮಂಗಳೂರಿನ ಮಹಾನಗರ ಪಾಲಿಕೆಯ ಕಟ್ಟಡದ ಒಂದನೇ ಮಹಡಿಯಲ್ಲಿರುವ ನೂತನ ಕಚೇರಿಯಲ್ಲಿ ಭಾರತೀಯ ಸಂವಿಧಾನ ಪೀಠಿಕೆ ಮತ್ತು ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಫೆ.3 ರಂದು ನಡೆಯಿತು.
ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಭಾವಚಿತ್ರ ಅನಾವರಣ ಮಾಡಿ ಮಾತನಾಡಿ, ಇದು ಉತ್ತಮ ಚಿಂತನೆಯಾಗಿದೆ ಸಂವಿಧಾನ ಮತ್ತು ಅಂಬೇಡ್ಕರ್ ಅವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ . ಪ್ರತಿಯೊಬ್ಬರ ಮನದಲ್ಲೂ ಸಂವಿಧಾನ ಪೀಠಿಕೆ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳ ಕುರಿತು ಜಾಗೃತಿ ಮೂಡಲಿ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು. ಪ್ರತಿ ಸರಕಾರಿ ಕಛೇರಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಅನಾವರಣ ಮಾಡಬೇಕು ಎಂಬ ಆಶಯದೊಂದಿಗೆ ಪುತ್ತೂರಿನ ಸಮಾನ ಮನಸ್ಕರಾದ ಜನಾರ್ದನ್ ಬಿ, ರೆ.ವಿಜಯ ಹಾರ್ವಿನ್, ಮಹಮ್ಮದ್ ಬಡಗನ್ನೂರು, ಸೇಸಪ್ಪ ಬೆದ್ರಕಾಡು, ರಾಮಣ್ಣ ಪಿಲಿಂಜ, ಸಿಶೇ ಕಜೆಮಾರ್‌ರವರು ಈಗಾಗಲೇ ಸರ್ಕಾರದ ಮಟ್ಟದಲ್ಲಿ ಮನವಿ ಸಲ್ಲಿಸಿದ್ದರು.