- ಫೆ.5 ಹೊರೆಕಾಣಿಕೆ ಭವ್ಯ ಮೆರವಣಿಗೆ
- ಬೆಳಿಗ್ಗೆ, ಸಂಜೆ ವೈದಿಕ ಕಾರ್ಯಕ್ರಮ, ಭಜನೆ
- ನೃತ್ಯ, ಸಂಗೀತ, ನಾಟಕ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
- ಗೌರಮ್ಮ ಶಬರಾಯ ಸಭಾಭವನ, ಎಲಿಕ್ಕಳ ಕೃಷ್ಣ ಶಬರಾಯ ವೇದಿಕೆ
- ಫೆ.10: ಪುನರ್ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ
- ಪ್ರತಿದಿನ ಮಧ್ಯಾಹ್ನ, ರಾತ್ರಿ ಅನ್ನಸಂತರ್ಪಣೆ
ನೆಲ್ಯಾಡಿ: ಜೀರ್ಣೋದ್ದಾರಗೊಂಡಿರುವ ಕಡಬ ತಾಲೂಕಿನ ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.5ರಿಂದ 10ರ ತನಕ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಫೆ.5ರಂದು ಬೆಳಿಗ್ಗೆ 9ರಿಂದ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ನಡೆಯಲಿದೆ. 9.30ಕ್ಕೆ ಗೋಳಿತ್ತೊಟ್ಟು ವಿನಾಯಕ ಬೆಟ್ಟ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಿಂದ ಹೊರೆಕಾಣಿಕೆಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರು, ಪ್ರಧಾನ ಅರ್ಚಕರೂ ಆದ ನಾರಾಯಣ ಬಡೆಕ್ಕಿಲ್ಲಾಯ ಉದ್ಘಾಟಿಸಲಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಶಾಂತ ಸರಳಾಯ ಅವರು ಉಗ್ರಾಣವನ್ನು, ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಂಜುನಾಥ ಗೌಡ ಕೈಕುರೆ ಅವರು ಕಾರ್ಯಾಲಯ ಉದ್ಘಾಟಿಸಲಿದ್ದಾರೆ. ಸಂಜೆ 4ರಿಂದ ಭಜನಾ ಕಾರ್ಯಕ್ರಮ, 5.30ರಿಂದ ಕ್ಷೇತ್ರದ ತಂತ್ರಿಗಳಿಗೆ ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ದೇವತಾ ಪ್ರಾರ್ಥನೆ, ವೈದಿಕ ಕಾರ್ಯಕ್ರಮ ನಡೆಯಲಿದೆ.
6.30ರಿಂದ ಗೌರಮ್ಮ ಶಬರಾಯ ಸಭಾಭವನದಲ್ಲಿ ಎಲಿಕ್ಕಳ ಕೃಷ್ಣ ಶಬರಾಯ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಅಸ್ರಣ್ಣ ಅವರು ಉದ್ಘಾಟಿಸಲಿದ್ದಾರೆ. ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು ಕೆಮ್ಮಿಂಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಫೆ.6ರಂದು ಬೆಳಿಗ್ಗೆ 5.30ರಿಂದ ವಿವಿಧ ವೈದಿಕ ಕಾರ್ಯಕ್ರಮ, ಬೆಳಿಗ್ಗೆ 10ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 4ರಿಂದ ಭಜನೆ, 5.30ರಿಂದ ವೈದಿಕ ಕಾರ್ಯಕ್ರಮ ನಡೆಯಲಿದೆ. 6.30ರಿಂದ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಧಾರ್ಮಿಕ ಪರಿಷತ್ತು ಮಾಜಿ ಸದಸ್ಯ ಸೂರ್ಯನಾರಾಯಣ ಕಶೆಕೋಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದು ಮಾಜಿ ಸಂಸದ ನಳಿನ್ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಫೆ.7ರಂದು ಬೆಳಿಗ್ಗೆ 5.30ರಿಂದ ವೈದಿಕ ಕಾರ್ಯಕ್ರಮ, ಬೆಳಿಗ್ಗೆ 10ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 4ರಿಂದ ಭಜನೆ, 5.30ರಿಂದ ವೈದಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 6.30ರಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಕರ್ಮಯೋಗಿ ಯೋಗಿಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಂಸದ ಕ್ಯಾ| ಬ್ರಿಜೇಶ್ ಚೌಟ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಫೆ.8ರಂದು ಬೆಳಿಗ್ಗೆ 5.30ರಿಂದ ವೈದಿಕ ಕಾರ್ಯಕ್ರಮ ಆರಂಭ, ಬೆಳಿಗ್ಗೆ 10ರಿಂದ ಭಜನೆ ನಡೆಯಲಿದೆ. ಸಂಜೆ 4ರಿಂದ ಭಜನೆ, 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಫೆ.9ರಂದು ಬೆಳಿಗ್ಗೆ 5.30ರಿಂದ ವೈದಿಕ ಕಾರ್ಯಕ್ರಮ, ಬೆಳಿಗ್ಗೆ 10ರಿಂದ ಭಜನೆ ನಡೆಯಲಿದೆ. ಸಂಜೆ 4ರಿಂದ ಭಜನೆ, 5.30ರಿಂದ ವೈದಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಮಂಗಳೂರು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಅರುಣ್ ಉಳ್ಳಾಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮಾಜಿ ಸಚಿವ ರಮಾನಾಥ ರೈ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಫೆ.10ರಂದು ಬೆಳಿಗ್ಗೆ 5.30ರಿಂದ ವೈದಿಕ ಕಾರ್ಯಕ್ರಮ ನಡೆದು ಶ್ರೀ ವಿಷ್ಣುಮೂರ್ತಿ ದೇವರ, ಶ್ರೀ ಕೊಣಾಲು ದೈವದ ಪುನರ್ಪ್ರತಿಷ್ಠೆ ನಡೆದು ಬ್ರಹ್ಮಕಲಶೋತ್ಸವ ನಡೆಯಲಿದೆ. ಈ ದಿನ ಬೆಳಿಗ್ಗೆ 6ರಿಂದ ಸಂಜೆ 6ರ ತನಕ ಅರ್ಧಏಕಾಹ ಭಜನೆ ನಡೆಯಲಿದ್ದು ವಿವಿಧ ಭಜನಾ ತಂಡಗಳು ಭಾಗವಹಿಸಲಿವೆ. ಸಂಜೆ 6.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಫೆ.5ರಿಂದ 10ರ ತನಕ ಪ್ರತಿದಿನ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ತಿಳಿಸಿದೆ.
ಫೆ.10: ಪುನರ್ಪ್ರತಿಷ್ಠೆ, ಬ್ರಹ್ಮಕಲಶೋತ್ಸವ
ಫೆ.10ರಂದ ಬೆಳಿಗ್ಗೆ 5.30ರಿಂದ ವೈದಿಕ ಕಾರ್ಯಕ್ರಮ ಆರಂಭವಾಗಲಿದ್ದು 8.48 ರಿಂದ 9.32ರ ತನಕ ನಡೆಯುವ ಶುಭ ಮುಹೂರ್ತದಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಬಳಿಕ ಶ್ರೀ ಕೊಣಾಲು ದೈವದ ಪುನರ್ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ರಾತ್ರಿ 7.30ರಿಂದ ಶ್ರೀ ದೇವರಿಗೆ ರಂಗಪೂಜೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು:
- ಫೆ.5 ರಾತ್ರಿ 9.30ರಿಂದ ಲಹರಿ ಸಂಗೀತ ಕಲಾಕೇಂದ್ರ ಐಐಸಿಟಿ ನೆಲ್ಯಾಡಿ ಇವರಿಂದ ಅಂತಾರಾಷ್ಟ್ರೀಯ ರ್ಯಭಟ ಪ್ರಶಸ್ತಿ ಪುರಸ್ಕೃತ ಕಲಾರತ್ನ ವಿಶ್ವನಾಥ ಶೆಟ್ಟಿ ಕೆ.ನರ್ದೇಶನದ ’ನಗಬೇಕು ಆಗಾಗ ಬದುಕಿನೊಳಗೆ’ ಸಂಗೀತ ಹಾಸ್ಯಲಹರಿ.
- ಫೆ.6ರಂದು ಬೆಳಿಗ್ಗೆ 11ರಿಂದ 2.30ರ ತನಕ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕರ್ಯಕ್ರಮ, ಸಂಜೆ 5ರಿಂದ ಗೋಳಿತ್ತೊಟ್ಟು ಪೂಜಾ ಕಲಾ ತಂಡದವರಿಂದ ನೃತ್ಯ ವೈಭವ, ರಾತ್ರಿ 9ರಿಂದ ಯಜ್ಞೇಶ ಆಚರ್ಯ ಸುಬ್ರಹ್ಮಣ್ಯ ಮತ್ತು ಬಳಗದವರಿಂದ ಸಂಗೀತ ಕರ್ಯಕ್ರಮ, ರಾತ್ರಿ 10ರಿಂದ ವಿದುಷಿ ರೇಷ್ಮಾ ಅಜಯ್ ಸರಳಾಯ ತಂಡದಿಂದ ನೃತ್ಯಾಂಜಲಿ.
- ಫೆ.೭ರಂದು ಮಧ್ಯಾಹ್ನ 11.30ರಿಂದ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲೆ ವಿದ್ಯರ್ಥಿಗಳಿಂದ ಸಾಂಸ್ಕೃತಿಕ ಕರ್ಯಕ್ರಮ, ಸಂಜೆ 5ರಿಂದ ಶ್ರೀ ರಾಮಕೃಷ್ಣ ಭಟ್ ಅಂಜರ ಮತ್ತು ಬಳಗದವರಿಂದ ಸಂಗೀತ ಕರ್ಯಕ್ರಮ, ರಾತ್ರಿ 9ರಿಂದ ಯಕ್ಷಗಾನ ನಾಟ್ಯ ವೈಭವ.
- ಫೆ.8ರಂದು ಮಧ್ಯಾಹ್ನ 12ರಿಂದ ನೆಲ್ಯಾಡಿ ಬ್ರಹ್ಮ ತೇಜಸ್ಸು ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾ ಸಂಘದವರಿಂದ ಯಕ್ಷಗಾನ ತಾಳಮದ್ದಳೆ, ರಾತ್ರಿ 9ರಿಂದ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
- ಫೆ.9ರಂದು ಮಧ್ಯಾಹ್ನ 12ರಿಂದ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ಯಕ್ಷಗಾನ ತಾಳಮದ್ದಳೆ, ಸಂಜೆ 6ರಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಅದಿತಿ ಮೊಗೇರೋಡಿ ಅವರಿಂದ ನೃತ್ಯ, ರಾತ್ರಿ 9ರಿಂದ ಬೊಳ್ಳಿಮಲೆತ ಶಿವಶಕ್ತಿಲು ನಾಟಕ.
- ಫೆ.10ರಂದು ರಾತ್ರಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಸಾಕೇತ ಸಾಮ್ರಾಜ್ಞಿ ಯಕ್ಷಗಾನ