ಬಡಗನ್ನೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ, ಪಡುಮಲೆ, ಶ್ರೀ ಕಟೀಲು ಮೇಳದ ಯಕ್ಷಗಾನ ಬಯಲಾಟ ಸೇವಾ ಸಮಿತಿ ಪಡುಮಲೆ ಇದರ ವತಿಯಿಂದ ಸಾರ್ವಜನಿಕ ಶ್ರೀ ಚಂಡಿಕಾ ಹವನ ಮತ್ತು ಶ್ರೀ ಕಟೀಲು ಮೇಳದ ಯಕ್ಷಗಾನ ಬಯಲಾಟ ಸೇವೆ (ಸಂಪೂರ್ಣ ಶ್ರೀ ದೇವಿ ಮಹಾತ್ಮೆ) ಕಾರ್ಯಕ್ರಮವು ಶ್ರೀ ಕಟೀಲು ಪೂಜ್ಯ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ರವರ ಗೌರವಾಧ್ಯಕ್ಷತೆಯಲ್ಲಿ, ಶ್ರೀ ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.7 ರಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.
ಕಲಾಭಿಮಾನಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರ್ಯಕ್ರಮಗಳು:
ಫೆ.7 ರಂದು ಪೂರ್ವಾಹ್ನ ಗಂ. 7.30ಕ್ಕೆ ದೀಪ ಪ್ರಜ್ವಲನೆ, 9.45ಕ್ಕೆ ಕಟೀಲು ಮೇಳದ ಶ್ರೀ ದೇವರ ಪೂಜೆ, 10 ರಿಂದ ಲಲಿತ ಸಹಸ್ರನಾಮ ಪಾರಾಯಣ, 11 ರಿಂದ ಧಾರ್ಮಿಕ ಕಾರ್ಯಕ್ರಮ, 12 ರಿಂದ ಶ್ರೀ ಚಂಡಿಕಾ ಹವನದ ಪೂರ್ಣಾಹುತಿ, 12.30ಕ್ಕೆ ಶ್ರೀ ಕ್ಷೇತ್ರ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವತ್ರಿಕ ಅನ್ನಪ್ರಸಾದ ವಿತರಣೆ ನಡೆಯಲಿರುವುದು. ಸಂಜೆ ಗಂ 5.45ಕ್ಕೆ ಚೌಕಿ ಪೂಜೆ ಬಳಿಕ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ಸೇವೆ ನಡೆಯಲಿದೆ. ರಾತ್ರಿ ಗಂ.8 ರಿಂದ ಅನ್ನಸಂತರ್ಪಣೆ ನಡೆಯಲಿದೆ.
ಧಾರ್ಮಿಕ ಸಭಾ ಕಾರ್ಯಕ್ರಮ
ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಕಟೀಲು ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿ ರವರು ಅರ್ಶಿವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ ಕುಮಾರ್ ರೈ, ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖಾ ಸದಸ್ಯೆ ಮಲ್ಲಿಕಾ ಪಕ್ಕಳ ಮಲಾರ ಬೀಡು, ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಷಲತಾ ದೇವಕಜೆ, ಶ್ರೀ ಕ್ಷೇತ್ರ ನಳೀಲು ಆಡಳಿತ ಮೂಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಗೌರವ ಉಪಸ್ಥಿತರಾಗಿ ಶ್ರೀ ಕ್ಷೇತ್ರ ಪಡುಮಲೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ಶ್ರೀ ಕ್ಷೇತ್ರ ಪಡುಮಲೆ ಪವಿತ್ರಪಾಣಿ ಕೇಶವ ಭಟ್ ಕೂವೆತ್ತೋಟ, ಶ್ರೀ ಕ್ಷೇತ್ರ ಪಡುಮಲೆ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮನೋಜ್ ರೈ ಪೇರಾಲು, ಪಡುಮಲೆ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ರವಿರಾಜ ಶೆಟ್ಟಿ ಅಣಿಲೆ, ಪಡುಮಲೆ ಶ್ರೀ ಕಟೀಲು ಮೇಳದ ಯಕ್ಷಗಾನ ಬಯಲಾಟ ಸೇವಾ ಸಮಿತಿ ಅಧ್ಯಕ್ಷ ಉದಯ ಕುಮಾರ್ ರತ್ನ ಮಾನಸ ಭಾಗವಹಿಸಲಿದ್ದಾರೆ.