ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಫೆ.4 ರ ರಾತ್ರಿ ನಡೆದಿದೆ.
ಬೈಕ್ ನಲ್ಲಿದ್ದ ಸವಾರ ಮತಾವು ನಿವಾಸಿ ಎನ್ನಲಾಗಿದ್ದು ಅವರು ಗಂಭೀರ ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಬಾಲಕ ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಚಾಲನಕನಿಗೂ ಗಾಯವಾಗಿದೆ.
ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಬಾಲಕ ಡಾಮಾರು ರಸ್ತೆಗೆ ಎಸೆಯಲ್ಪಟ್ಟ ವೇಳೆ ತುಸುದೂರದಲ್ಲಿದ್ದ ಇಸಾಕ್ ಸಾಲ್ಮರ ಅವರು ಬಾಲಕನ್ನು ರಕ್ಷಣೆ ಮಾಡಿ ಉಪಚರಿಸಿದರು. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.