ಪುತ್ತೂರು : ದ.ಕ.ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪ್ ಸೊಸೈಟಿಯ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕುಂಬ್ರ ದಯಾಕರ ಆಳ್ವ ಗೆಲುವು ಸಾಧಿಸಿದ್ದಾರೆ. ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಸ್ಥಾನದಲ್ಲಿ ಕೆ.ಜೈರಾಜ್ ಬಿ ರೈ ತಂಡದಿಂದ ಕುಂಬ್ರ ದಯಾಕರ ಆಳ್ವ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ.
ಪ್ರಸುತ್ತ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿರುವ ದಯಾಕರ ಆಳ್ವರು ಕಳೆದ ನಾಲ್ಕು ದಶಕಗಳಿಂದ ಸಹಕಾರ, ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕಳೆದ ಅವಧಿಯಲ್ಲಿಯು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪ್ ಸೊಸೈಟಿಯ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.