ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ರಾಜೇಶ್ ಬನ್ನೂರು ವಾಸ್ತವ್ಯವಿದ್ದ ಮನೆಯನ್ನು ಧ್ವಂಸ ಮಾಡಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜೇಶ್ ಬನ್ನೂರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ವಿನಯ್ ಸುವರ್ಣ ಹಾಗೂ ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಲಂ : 189(2), 191(2), 191(3), 324 (5), 325, 305, 115 (2), 351 (2), R/w 190 ಬಿಎನ್ಎಸ್ ರಂತೆ ಪ್ರಕರಣ ದಾಖಲಾಗಿದೆ.