ರಾಮಕುಂಜ: ಇಲ್ಲಿನ ಈರಕೀಮಠದ ನರಹರಿ ಉಪಾಧ್ಯಾಯ ಅವರಿಗೆ ಉಡುಪಿಯ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈರಕೀಮಠ ಸಮಾಜಕ್ಕಾಗಿ ಸಲ್ಲಿಸುತ್ತಿರುವ ನಿರಂತರ ಸೇವೆಯನ್ನು ಗುರುತಿಸಿ ನರಹರಿ ಉಪಾಧ್ಯಾಯ ದಂಪತಿಯನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥರು ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಸನ್ಮಾನಿಸಿದರು.