ಫೆ.9:ಭಂಡಾರಿ ಸಮಾಜ ಸಂಘ, ಮಹಿಳಾ ಭಂಡಾರಿ ಸಮಾಜ ಸಂಘ, ಭಂಡಾರಿ ಯುವ ವೇದಿಕೆಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾಸಭೆ

0

ಪುತ್ತೂರು: ಭಂಡಾರಿ ಸಮಾಜ ಸಂಘ ಪುತ್ತೂರು, ಮಹಿಳಾ ಭಂಡಾರಿ ಸಮಾಜ ಸಂಘ ಪುತ್ತೂರು, ಭಂಡಾರಿ ಯುವ ವೇದಿಕೆ ಪುತ್ತೂರು ಇವುಗಳ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಂಡಾರಿ ಸಮಾಜ ಸಂಘದ ಮಹಾಸಭೆಯು ಫೆ.9 ರಂದು ಬಪ್ಪಳಿಗೆ ಜೈನ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜರಗಲಿದ್ದು ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಕೇಶವ ಭಂಡಾರಿ ಬೆಳ್ಳಿಪ್ಪಾಡಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬಾರ್ಕೂರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಅಧ್ಯಕ್ಷ ಲಕ್ಷ್ಮಣ ಕರಾವಳಿ, ಬಾರ್ಕೂರು ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಕರ್ನಾಟಕ ಸರ್ಕಾರ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿರವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಭಂಡಾರಿ ಸಮಾಜ ಸಂಘದ ಗೌರವಾಧ್ಯಕ್ಷ ವಿನಯ ಭಂಡಾರಿ, ಅಧ್ಯಕ್ಷ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕಾರ್ಯದರ್ಶಿ ಹರೀಶ್ ಭಂಡಾರಿ ಕುಂಜೂರುಪಂಜ, ಕೋಶಾಧಿಕಾರಿ ನವೀನ ಎಂ.ಮೂಡಂಬೈಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here