ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಪ್ರಜ್ಞಾ ಇವರು ಫೆ.7ರಂದು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ತುಳು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಮತ್ತು ಶಾಲಾ ಶಿಕ್ಷಕರು ಮಾರ್ಗದರ್ಶನ ನೀಡಿರುತ್ತಾರೆ. ಇವರು ಅಲಂಕಾರು ಗ್ರಾಮದ ಪೆರಾಬೆ ನಿವಾಸಿ ಚಿದಾನಂದ ಭಂಡಾರಿ ಹಾಗೂ ಆಶಾಲತಾ ದಂಪತಿಗಳ ಸುಪುತ್ರಿ ಯಾಗಿರುತ್ತಾರೆ.