ದ್ವಾರಕೋತ್ಸವ – 2025ರ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ದ್ವಾರಕಾ ಕಾರ್ಪೊರೇಷನ್ ಪ್ರೈ.ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಯುವ ದ್ವಾರಕೋತ್ಸವ 2025 ರ ಕಾರ್ಯಕ್ರಮದ “ಆಮಂತ್ರಣ ಪತ್ರಿಕೆ ಬಿಡುಗಡೆ” ಫೆ.5ರಂದು ನಡೆಯಿತು.

ಪುತ್ತೂರು ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ ಭಟ್ ಬಿಡುಗಡೆಗೊಳಿಸಿ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್, ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ, ಸಂಸ್ಥೆಯ ನಿರ್ದೇಶಕರಾದ ಅಶ್ವಿನಿ ಎನ್, ಅಮೃತಕೃಷ್ಣ ಮತ್ತು ಅಮೃತಾ ಶಾನುಭಾಗ್ ಉಪಸ್ಥಿತರಿದ್ದರು.

ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್ ಮಾತನಾಡಿ,ಇದೇ ಬರುವ ಫೆಬ್ರವರಿ 16 “ದ್ವಾರಕೋತ್ಸವ 2025” ರ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.

ಸಂಸ್ಥೆಯ ಸಿಬ್ಬಂದಿ ದುರ್ಗಾ ಗಣೇಶ್ ಸ್ವಾಗತಿಸಿ,ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ಅಮೃತ ಕೃಷ್ಣ ವಂದಿಸಿದರು.ಈ ಸಂದರ್ಭದಲ್ಲಿ ಬಂಧುಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here