ಪುತ್ತೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿದ್ದಾರೆ. ಸಾಮಾಜಿಕವಾಗಿಯೂ ತೊಡಗಿಸಿಕೊಂಡಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದಾರೆ.