ಕಡಬ: ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಡಬದ ಪೈಝಲ್ ಎಸ್.ಇ ಎಸ್ ರವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿರುವ ಪೈಝಲ್ ಅವರು ಫ್ರೆಂಡ್ಸ್ ಕ್ಲಬ್ ಕಡಬ ಇದರ ಅಧ್ಯಕ್ಷರಾಗಿದ್ದು, ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳಲ್ಲೂ ಇವರು ಸಕ್ರಿಯರಾಗಿದ್ದಾರೆ.