ಪುತ್ತೂರು:ಪುತ್ತೂರು ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ಗಳನ್ನೊಳಗೊಂಡ ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ನ ಅಧ್ಯಕ್ಷರಾಗಿ ಫಾರೂಕ್ ಪೆರ್ನೆ ಆಯ್ಕೆಯಾಗಿದ್ದಾರೆ.
ವಿಧಾನ ಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ಗಳ ಅಧ್ಯಕ್ಷರ ಆಯ್ಕೆಗೆ ಕಳೆದ ಸಪ್ಟಂಬರ್ ತಿಂಗಳಲ್ಲಿ ಆನ್ಲೈನ್ ಆಪ್ ಮೂಲಕ ಮತದಾನ ನಡೆದಿತ್ತು. ಆನ್ಲೈನ್ನಲ್ಲಿ ಚಲಾವಣೆಯಾದ ಮತಗಳ ಪರಿಶೀಲನೆ ನಡೆದು ಫೆ.7ರಂದು ರಾತ್ರಿ ಆನ್ಲೈನ್ನಲ್ಲಿ ಫಲಿತಾಂಶ ಪ್ರಕಟಗೊಂಡಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿಯಾಗಿರುವ ಫಾರೂಕ್ ಪೆರ್ನೆಯವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ನ ಮಾಜಿ ಅಧ್ಯಕ್ಷರಾಗಿರುತ್ತಾರೆ. ಪ್ರಸ್ತುತ ಪೆರ್ನೆ ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿರುತ್ತಾರೆ.