ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರಕುಮಾರ್, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರಿಗೆ ಬೃಹತ್ ಅಭಿನಂದನಾ ಸಮಾರಂಭ-ಪೂರ್ವಭಾವಿ ಸಭೆ

0

ಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ‘ಸಹಕಾರರತ್ನ’ ಡಾ|ಎಂ.ಎನ್.ರಾಜೇಂದ್ರಕುಮಾರ್ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ರವರಿಗೆ ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಸಹಕಾರ ಸಂಘ, ಸಂಸ್ಥೆಗಳ ವತಿಯಿಂದ ಮಾ.1ರಂದು ಪುತ್ತೂರಿನಲ್ಲಿ ನಡೆಯುವ ಬೃಹತ್ ಅಭಿನಂದನಾ ಸನ್ಮಾನ ಕಾರ್ಯಕ್ರಮದ ಪೂರ್ವಭಾವಿ ಸಭೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪುತ್ತೂರು ಪ್ರಧಾನ ಕಚೇರಿಯಲ್ಲಿ ನಡೆಯಿತು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರೂ ಆಗಿರುವ ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ಬಿ ಜಯರಾಮ ರೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಭಿನಂದನಾ ಸನ್ಮಾನಗೊಳ್ಳಲಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ 1999ರಲ್ಲಿ ಪತ್ರಿಕಾ ಮಾಧ್ಯಮದ ಸದಸ್ಯತ್ವ ಪಡೆದುಕೊಂಡ ಎಮ್.ಎನ್.ರಾಜೇಂದ್ರ ಕುಮಾರ್‌ರವರು ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಇದು ರಾಷ್ಟ್ರಮಟ್ಟದಲ್ಲೇ ದೊಡ್ಡ ಹುದ್ದೆಯಾಗಿದೆ. ಈ ಹುದ್ದೆಗೆ ನಿವೃತ್ತ ಜಡ್ಜ್‌ಗಳು ಆಯ್ಕೆಯಾಗುತ್ತಿದ್ದರು. ಆದರೆ ಡಾ|ಎಮ್.ಎನ್.ರಾಜೇಂದ್ರ ಕುಮಾರ್‌ರವರು ನೇಮಕಗೊಂಡಿದ್ದು ನಮಗೆಲ್ಲಾ ಹೆಮ್ಮೆಯಾಗಿದೆ. ಈ ನಿಟ್ಟಿನಲ್ಲಿ ಮಾ.1ರಂದು ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಡಾ| ಎಮ್.ಎನ್.ರಾಜೇಂದ್ರ ಕುಮಾರ್‌ರವರನ್ನು ಕೂಡ ಅಭಿನಂದಿಸುವ ಸಮಾರಂಭ ಮಾಡೋಣ ಎಂದು ಹೇಳಿ ಎಲ್ಲರೂ ಸಹಕಾರ ನೀಡುವಂತೆ ಹೇಳಿದರು.


ಅಭಿನಂದನಾ ಸಮಿತಿಯ ಗೌರವ ಸಲಹೆಗಾರ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮಾತನಾಡಿ ಅಭಿನಂದನಾ ಕಾರ್ಯಕ್ರಮ ಯಶಸ್ವಿ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ. ಕಾರ್ಯಕ್ರಮದ ಸಣ್ಣ ಸಣ್ಣ ವಿಚಾರಗಳಿಗೆ ಕೂಡ ನಾವು ಗಮನ ಕೊಡಬೇಕು. ಸಂಪನ್ಮೂಲ ಕ್ರೋಢೀಕರಣ, ಇತರ ವ್ಯವಸ್ಥೆಗಳು ಆಗಬೇಕಾಗಿದೆ. ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳೋಣ. ಎಲ್ಲಾ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದರು.‌


ಅಧ್ಯಕ್ಷತೆ ವಹಿಸಿದ್ದ ಅಭಿನಂದನಾ ಸಮಿತಿ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ ಜಯರಾಮ ರೈ ಮಾತನಾಡಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್‌ರವರು ರಾಷ್ಟ್ರೀಯ ಮಟ್ಟದ ಹುದ್ದೆ ಅಲಂಕರಿಸಿದ್ದಾರೆ. ಮಾ.1ರಂದು ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಿಗೆ ಕೂಡ ಅಭಿನಂದನೆ ಮಾಡಲಾಗುತ್ತದೆ. ಕಾರ್ಯಕ್ರಮವನ್ನು ಕೊಂಬೆಟ್ಟು ಬಂಟರ ಭವನದಲ್ಲಿ ನಡೆಸಲಾಗುವುದು. ಸಮಾರಂಭಕ್ಕೆ ಕನಿಷ್ಠ 1500ರಷ್ಟು ಮಂದಿ ಆಗಮಿಸಲು ತಾವೆಲ್ಲರೂ ಸಹಕರಿಸಬೇಕು. ಪುತ್ತೂರು, ಸುಳ್ಯ, ಕಡಬ. ಬೆಳ್ತಂಗಡಿ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಸಿಬ್ಬಂದಿಗಳಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅಂದು ರಜೆ ನೀಡಲಾಗುವುದು. ಈ ಸಮಾರಂಭವನ್ನು ತಮ್ಮ ಮನೆಯ ಕಾರ್ಯಕ್ರಮ ಎಂದು ಭಾವಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿ ಸಹಕಾರ ಕೋರಿದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಅಭಿನಂದನಾ ಸಮಿತಿ ಸಂಚಾಲಕರುಗಳಾದ ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ ಪೂವಾಜೆ, ಪುತ್ತೂರು ತಾಲೂಕು ಸಹಸಂಚಾಲಕ ಪ್ರಕಾಶ್ಚಂದ್ರ ರೈ ಕೈಕಾರ, ಕಡಬ ತಾಲೂಕು ಸಹಸಂಚಾಲಕ ಗಣೇಶ ಉದನಡ್ಕ, ಬೆಳ್ತಂಗಡಿ ತಾಲೂಕು ಸಹಸಂಚಾಲಕ ರಾಘವೇಂದ್ರ ನಾಯಕ್, ಕೋಶಾಽಕಾರಿ ಹರೀಶ್ ರೈ ಪಿ.ರವರು ವಿವಿಧ ಸಲಹೆ ಸೂಚನೆ ನೀಡಿದರು. ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸತೀಶ ಬಲ್ನಾಡು, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್, ಪುತ್ತೂರು ಟಿಎಪಿಸಿಎಮ್‌ಎಸ್ ಅಧ್ಯಕ್ಷ ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಜಬಾಳೆ, ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ರಾಮಯ್ಯ ರೈ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಮಧುಕರ ಭಟ್ ಹೆಚ್., ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಸುದರ್ಶನ್, ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಜಯಂತಿ ಭಾಸ್ಕರ್, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಭವಾನಿ ಬಿ.ಆರ್., ಬನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ರಾಧಾ ಬಿ.ರೈ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ವೀರೇಂದ್ರ ಜೈನ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ನೇಮಿರಾಜ್, ಸುಳ್ಯ ಎಸ್‌ಸಿಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಚಂದ್ರಪ್ರಕಾಶ್, ಪುತ್ತೂರು ಎಸ್‌ಸಿಡಿಸಿಸಿ ಬ್ಯಾಂಕ್ ಉಪವ್ಯವಸ್ಥಾಪಕ ಸುಬ್ರಹ್ಮಣ್ಯ ಭಟ್, ಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕರುಗಳಾದ ರತನ್, ಸಿರಾಜುದ್ದೀನ್, ಮನೋಜ್, ಪ್ರದೀಪ್, ನವೋದಯ ಸ್ವಸಹಾಯ ಗುಂಪುಗಳ ಮೇಲ್ವಿಚಾರಕ ಚಂದ್ರಶೇಖರ್, ಮಾರಾಟಾಽಕಾರಿ ಆದರ್ಶ್, ಸಿಬ್ಬಂದಿ ದೀಕ್ಷಿತ್ ಸಲಹೆ ಸೂಚನೆ ನೀಡಿದರು.


ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ವಲಯ ಮೇಲ್ವಿಚಾರಕ ವಸಂತ ಎಸ್. ವಂದಿಸಿದರು.

LEAVE A REPLY

Please enter your comment!
Please enter your name here