ರಾಜ್ಯಮಟ್ಟದ ಪ್ರತಿಭಾ ಕಾರಂಜಿ: ತುಳುಭಾಷಣದಲ್ಲಿ ರಾಮಕುಂಜ ಆ.ಮಾ.ಶಾಲೆಯ ಪ್ರಜ್ಞಾಗೆ ಪ್ರಥಮ ಸ್ಥಾನ

0

ರಾಮಕುಂಜ: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ದಕ್ಷಿಣ ಹಾಗೂ ಕೋಟೆನಾಡು ಚಿತ್ರದುರ್ಗ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಫೆ.7ರಂದು ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ ಅವರು ತುಳು ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಈಕೆ ದ್ವಿತೀಯ ಬಾರಿಗೆ ರಾಜ್ಯಮಟ್ಟದ ತುಳುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇವರಿಗೆ ಸಂಸ್ಥೆಯ ಶಿಕ್ಷಕಿ, ರಾಜ್ಯಮಟ್ಟದ ಪುರಸ್ಕೃತ ಗಣಿತ ಮತ್ತು ತುಳು ಶಿಕ್ಷಕಿಯೂ ಆಗಿರುವ ಸರಿತಾ ಜನಾರ್ದನ ಅವರು ಮಾರ್ಗದರ್ಶನ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ ಆರ್.ಬಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಗುರು ಲೋಹಿತಾ ಎ., ಶಿಕ್ಷಕ-ಶಿಕ್ಷಕೇತರ ವೃಂದದವರು ಶುಭಹಾರೈಸಿದರು. ಈಕೆ ಕಡಬ ತಾಲೂಕು ಪೆರಾಬೆ ಗ್ರಾಮದ ಆಲಂಕಾರು ನಿವಾಸಿ ಚಿದಾನಂದ ಭಂಡಾರಿ ಹಾಗೂ ಎಂ.ಆಶಾಲತಾ ಭಂಡಾರಿಯವರ ಪುತ್ರಿ.

LEAVE A REPLY

Please enter your comment!
Please enter your name here