ರಾಮಕುಂಜ: ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ.9ರಿಂದ 13ರ ತನಕ ನಡೆಯಲಿದ್ದು ಫೆ.9ರಂದು ರಾತ್ರಿ ಧ್ವಜಾರೋಹಣ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ಸದಸ್ಯರು, ಉತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಬಳಿಕ ದೇವರ ಬಲಿ ಹೊರಟು ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.