ಪುತ್ತೂರು: ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ಹೈ ಮಾಸ್ಟ್ ದೀಪ ಅಳವಡಿಸುವಂತೆ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ರೂಪರಾಜ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.
ಜನವಸತಿ ಇರುವ ಮೊಗಪ್ಪೆಯಲ್ಲಿ ರಾತ್ರಿ ವೇಳೆ ಹೈ ಮಾಸ್ಟ್ ದೀಪದ ಅಗತ್ಯ ಇದ್ದು ಗ್ರಾಮಸ್ಥರ ಹಿತದೃಷ್ಟಿಯಿಂದ ದೀಪ ಅಳವಡಿಸುವಂತೆ ಶಾಸಕರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಮೊಗಪ್ಪೆಯಲ್ಲಿ ಹೈ ಮಾಸ್ಟ್ ದೀಪ ಅಳವಡಿಸುವ ಭರವಸೆಯನ್ನು ನೀಡಿದ್ದಾರೆ