ಪುತ್ತೂರು: ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನೆಲಪ್ಪಾಲ್ ಉದ್ಯಾನವನ ದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮ ಫೆ.9ರಂದು ಉದ್ಘಾಟನೆ ಮಾಡಿದರು.
ಜೀವಂದರ್ ಜೈನ್ ಸದಸ್ಯರು, ನಗರಸಭೆ ಪುತ್ತೂರು ಇವರು ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು. ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷ ಗೋಪಾಲಕೃಷ್ಣ ಭಟ್ ಸನ್ಮಾನಿಸಿದರು.
ಸಭಾ ಕಾರ್ಯಕ್ರಮದ ನಂತರ ಅಂತರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ವಿದುಷಿ ದಿವ್ಯ ಪ್ರಭಾತ್ ಬೆಂಗಳೂರು ಇವರಿಂದ ನೃತ್ಯೋಲ್ಲಾಸ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಸಿಬ್ಬಂದಿ ದುರ್ಗಾ ಗಣೇಶ್ ಸ್ವಾಗತಿಸಿ, ನಿರೂಪಿಸಿದರು. ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ವಂದಿಸಿದರು. ಈ ಸಂದರ್ಭದಲ್ಲಿ ಬಂಧುಗಳು, ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.