ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಭಜನಾ ಸಂಘದ ವಾರ್ಷಿಕೋತ್ಸವ, ನಗರ ಭಜನೆಯ ಮಂಗಲೋತ್ಸವ

0

ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಭಜನಾ ಸಂಘದ 42ನೇ ವಾರ್ಷಿಕೋತ್ಸವ ಮತ್ತು ನಗರ ಭಜನೆಯ ಮಂಗಲೋತ್ಸವ ಫೆ.8ರಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು.

ಜ.11ರಂದು ಆರಂಭಗೊಂಡ ನಗರಭಜನೆಯು ಫೆ.8ರಂದು ಮಂಗಲೋತ್ಸವ ನಡೆಯುವದರೊಂದಿಗೆ ಕೊನೆಗೊಂಡಿತು. ಬೆಳಿಗ್ಗೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ಗುಮಾಸ್ತ ಆರ್.ಬಿ.ಸುವರ್ಣರವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಮಧ್ಯಾಹ್ನ ಮಹಾಮಂಗಳಾರತಿ, ಸಂಜೆ ಭಜನಾ ಮಂಗಲೋತ್ಸವ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಶ್ರೀಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕ ವೇ.ಮೂ.ವೆಂಕಟ್ರಮಣ ಭಟ್‌ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಮೊಕ್ತೇಸರ ವಿನೋದ್ ಕುಮಾರ್ ರೈ ಬೆಟ್ಟಂಪಾಡಿಗುತ್ತು, ಭಜನಾ ಸಂಘದ ಗೌರವಾಧ್ಯಕ್ಷ ಶಿವಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಅಧ್ಯಕ್ಷ ಪ್ರಮೋದ್ ರೈ ಬಿ., ಕಾರ್ಯದರ್ಶಿ ಸುಹಾನ್ ರೈ ಅಂಗರಾಜೆ, ಕೋಶಾಧಿಕಾರಿ ದಾಮೋದರ ಮಾಲಡ್ಕ, ಸಂಚಾಲಕ ಸಂಜಯ್ ಬಲ್ಲಾಳ್ ಬೆಟ್ಟಂಪಾಡಿ ಬೀಡು ಹಾಗೂ ಪದಾಧಿಕಾರಿಗಳು, ಆಡಳಿತ ಸಮಿತಿ, ಅಭಿವೃದ್ಧಿ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here