ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂಗ್ಲ ಭಾಷಾ ಉಪನ್ಯಾಸಕ ಸುಬ್ರಹ್ಮಣ್ಯ ಭಟ್ ಅವರಿಗೆ ವಿದಾಯ ಕೂಟ

0

ಪುತ್ತೂರು: 1976 ರಿಂದ ವೃತ್ತಿ ಜೀವನವನ್ನು ಆರಂಭಿಸಿ ಸುಮಾರು 48 ವರ್ಷಗಳ ಕಾಲ ಅಧ್ಯಾಪಕ ವೃತ್ತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 7 ವರ್ಷಗಳ ಕಾಲ ಸೇವೆಗೈದ ಸುಬ್ರಹ್ಮಣ್ಯ ಭಟ್ ಅವರನ್ನು ಆಡಳಿತ ಮಂಡಳಿ ಹಾಗೂ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಆಡಳಿತಾಧಿಕಾರಿ ನ್ಯಾಯವಾದಿ ಅಶ್ವಿನ್ ಎಲ್ ಶೆಟ್ಟಿ ಇವರು ಶುಭಹಾರೈಕೆಯ ಮಾತುಗಳನ್ನಾಡಿದರು.

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್ ರೈ , ವಿದ್ಯಾರಶ್ಮಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಆಳ್ವ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಎಂ ಹಾಗೂ ಉಪನ್ಯಾಸಕ -ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here