ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಇದರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ವತಿಯಿಂದ ನೆಲ್ಯಾಡಿ ವಲಯದಲ್ಲಿ ಆಯೋಜಿಸಿದ್ದ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ದ.ಕ.ಜಿಲ್ಲೆ -2 ಇದರ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ರವರು ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಜ್ಞಾನವಿಕಾಸ ಕಾರ್ಯಕ್ರಮದ ಉದ್ದೇಶ ಹಾಗೂ ಪ್ರಯೋಜನದ ಕುರಿತು ಮಾತನಾಡಿ, ಹೊಲಿಗೆ ತರಬೇತಿ ನಿಮ್ಮನ್ನು ಧೈರ್ಯದಿಂದ ಬದುಕುವಂತೆ ಮಾಡುತ್ತದೆ. ನೀವು ಮುಂದಕ್ಕೆ ಇತರರಿಗೆ ಉದ್ಯೋಗ ನೀಡುವಂತವರಾಗಬೇಕು ಎಂದು ಹೇಳಿದರು.

ಜನ ಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಉದ್ಘಾಟಿಸಿ ಶುಭ ಹಾರೈಸಿದರು. ನೆಲ್ಯಾಡಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ನೆಲ್ಯಾಡಿ ವಲಯ ಅಧ್ಯಕ್ಷ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.
ನೆಲ್ಯಾಡಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ., ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಸದಸ್ಯ ತುಕಾರಾಮ್ ರೈ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿಯಾದ ರಮೇಶ್ ಬಾಣಜಾಲ್, ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯಧಿಕಾರಿ ಚೇತನ ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಹಾಗೂ ಹೊಲಿಗೆ ತರಬೇತಿ ಶಿಕ್ಷಕಿ ಗೀತಾ ಬೆಲ್ಲದ ಅನಿಸಿಕೆ ವ್ಯಕ್ತಪಡಿಸಿದರು. ಯಶ್ವಿನಿ ಸ್ವಾಗತಿಸಿದರು. ಚಂದ್ರಿಕಾ ವಂದಿಸಿದರು. ನವ್ಯಪ್ರಸಾದ್ ನಿರೂಪಿಸಿದರು. ಸೇವಾ ಪ್ರತಿನಿಧಿ ಹೇಮಾವತಿ ಜೆ., ನಮಿತಾ ಶೆಟ್ಟಿ ಸಹಕರಿಸಿದರು. 23 ಮಂದಿ ಹೊಲಿಗೆ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.