ನೆಲ್ಯಾಡಿ: ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಕಳಪ್ಪಾರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳಪ್ಪಾರು ಮತ್ತು ಪುತ್ತಿಗೆ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ತಂಡ ಕಳಪ್ಪಾರು ಮತ್ತು ಶ್ರೀ ಪರಶುರಾಮ ಭಜನಾ ತಂಡ ಉದನೆ ಪುತ್ತಿಗೆ ಇದರ ಭಜನಾ ತರಬೇತಿ ಕಾರ್ಯಕ್ರಮದ ಸಮರೋಪ ಹಾಗೂ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ಫೆ.2ರಂದು ಶಿರಾಡಿ ಗ್ರಾಮದ ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಅರ್ಚಕ ಪ್ರಶಾಂತ್ ಭಟ್ ಅವರು ಕುಣಿತ ಭಜನೆ ಉದ್ಘಾಟಿಸಿದರು. ಶಿರಾಡಿ ಗ್ರಾ.ಪಂ.ಅಧ್ಯಕ್ಷ ಕಾರ್ತಿಕೇಯನ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವಸಂತ ಗೌಡ ಧಾರ್ಮಿಕ ಉಪನ್ಯಾಸ ನೀಡಿದರು. ಕಳಪ್ಪಾರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಬಾಲಕೃಷ್ಣ ಗೌಡ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡೊಂಬಯ್ಯ ಗೌಡ ಕುದ್ಕೊಳಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಿವಾಕರ ಗೌಡ, ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಯನ್., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯಾಧ್ಯಕ್ಷ ಜಯಾನಂದ ಬಂಟ್ರಿಯಾಲ್, ಕಡಬ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ, ಪ್ರಗತಿಬಂಧು ಸ್ವಸಹಾಯ ಸಂಘ ಒಕ್ಕೂಟಗಳ ನೆಲ್ಯಾಡಿ ವಲಯಾಧ್ಯಕ್ಷ ಕುಶಾಲಪ್ಪ ಗೌಡ, ಪುತ್ತಿಗೆ ಒಕ್ಕೂಟದ ಅಧ್ಯಕ್ಷ ಲೋಕಯ್ಯ ಗೌಡ, ಕೇಂದ್ರ ಒಕ್ಕೂಟದ ಅಧ್ಯಕ್ಷ ಸಂತೋಷ್, ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪರಾರಿ ಶುಭ ಹಾರೈಸಿದರು.

ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ., ಸ್ವಾಗತಿಸಿದರು. ಪುತ್ತಿಗೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಪ್ರಿಯಲತಾ ವಂದಿಸಿದರು. ಕಡಬ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ ನಿರೂಪಿಸಿದರು. ರುಕ್ಮಿಣಿ ವರದಿ ವಾಚಿಸಿದರು. ಶಿರಾಡಿ ಒಕ್ಕೂಟದ ಸೇವಾಪ್ರತಿನಿಧಿ ಸುಮಿತ್ರಾ ಸಹಕರಿಸಿದರು. ನಂತರ ತರಬೇತಿ ಪಡೆದ ಭಜನಾ ತಂಡಗಳು ಮತ್ತು ಆಹ್ವಾನಿತ ತಂಡಗಳಿಂದ ಭಜನೋತ್ಸವ ನಡೆಯಿತು.