ಪುತ್ತೂರು: ಬೊಳುವಾರಿನಲ್ಲಿ ಫೆ.12 ರ ತಡರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದಿದೆ. ಗಾಯಾಳುಗಳು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿದು ಬಂದಿದೆ.
ಬಾಳುಗೋಡು ನಿವಾಸಿ ಉಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.