ನೆಲ್ಯಾಡಿ: ನೆಲ್ಯಾಡಿ ಸಂತಜಾರ್ಜ್ ಪದವಿಪೂರ್ವ ಕಾಲೇಜು ಇದರ ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಹಾಗೂ ಹದಿಹರೆಯದ ಸಮಸ್ಯೆಗಳು ಮತ್ತು ಮಾದಕ ದ್ರವ್ಯ ವ್ಯಸನ ಮುಕ್ತ ಜೀವನದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳ್ತಂಗಡಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಮ್ಮಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಹದಿಹರೆಯದ ಸಂದರ್ಭದಲ್ಲಿ ನಡೆಯುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಘಟಕ ನಾಯಕ ಆಶ್ಲೇಷ್, ಘಟಕ ನಾಯಕಿ ದೀಕ್ಷಿತ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾಸಂಸ್ಥೆಯ ಕಾರ್ಯದರ್ಶಿ ರೆ.ಫಾ.ಅನೀಶ್ ಪಾರಶೇರಿಲ್, ಸಂಚಾಲಕ ರೆ.ಫಾ ನೋಮಿಸ್ ಕುರಿಯಕೋಸ್ ಅವರ ಮಾರ್ಗದರ್ಶನ ನೀಡಿದ್ದರು.