ಉಪ್ಪಿನಂಗಡಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಉಪ್ಪಿನಂಗಡಿ ಹಾಗೂ ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಎರಡು ತಿಂಗಳು ನಡೆಯುವ ಕಸೂತಿ ತರಬೇತಿಯ ಉದ್ಘಾಟನೆ ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ನಡೆಯಿತು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಶೆಟ್ಟಿ ಅವರು ತರಬೇತಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮ ತಾಲೂಕು ವ್ಯವಸ್ಥಾಪಕ ಜಗತ್ ಕೆ., ಮಾತನಾಡಿ, ಸ್ವ-ಉದ್ಯೋಗದ ಮುಖಾಂತರ ಸ್ವಾವಲಂಬನೆ ಜೀವನ ನಡೆಸಬಹುದು ಎಂದು ಹೇಳಿ ಶುಭ ಹಾರೈಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಕಾರ್ಯದರ್ಶಿಯವರು, ತಾಲೂಕು ಅಭಿಯಾನ ನಿರ್ವಹಣೆ ಘಟಕದ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ, ಗ್ರಾಮ ಪಂಚಾಯತ್ ಸದಸ್ಯರು, ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಪ್ಪಿನಂಗಡಿ ಇದರ ಅಧ್ಯಕ್ಷರು ಉಪಸ್ಥಿತರಿದ್ದರು. ಪಶುಸಖಿ ಜಯಲಕ್ಷ್ಮಿ ನಿರೂಪಿಸಿದರು. ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರಾದ ಚೈತ್ರ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.