ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕುದ್ಮಾರು ಸ.ಉ.ಹಿ.ಪ್ರಾ ಶಾಲೆಗೆ ಮಂಜೂರಾದ 10 ಸೆಟ್ ಬೆಂಚು ಡೆಸ್ಕ್ ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಕುದ್ಮಾರು ಒಕ್ಕೂಟದ ಅಧ್ಯಕ್ಷೆ ಲಲಿತಾ ಈಶ್ವರ ಅವರು ವಹಿಸಿದ್ದರು. ಶಾಲಾ ಮುಖ್ಯಗುರು ಕುಶಾಲಪ್ಪ ಬಿ, ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು. ಕಡಬ ತಾಲೂಕಿನ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಲಂಕಾರು ವಲಯದ ಮೇಲ್ವಿಚಾರಕಿ ಸುಜಾತ ಪ್ರಾಸ್ತವಿಕ ಮಾತುಗಳನ್ನಾಡಿ, ಯೋಜನೆಯ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಯೋಗೀಶ ಬರೆಪ್ಪಾಡಿ, ಉಪಸ್ಥಿತರಿದ್ದರು. ಆಲಂಕಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರೇಮ ಕಾರ್ಯಕ್ರಮ ನಿರೂಪಣೆಯೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ವೀಣಾ ಕೆ ವಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ ,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.