ಪುತ್ತೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 4 ದಿನಗಳಿಂದ ರಾಜ್ಯವ್ಯಾಪಿ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರವು 5 ನೇ ದಿನಕ್ಕೆ ಕಾಲಿಟ್ಟಿದೆ.
ಪುತ್ತೂರು ತಾಲೂಕು ಆಡಳಿತ ಸೌಧದ ಮುಂದೆ ಮುಷ್ಕರ ನಿರತರಾದ ಅಧಿಕಾರಿಗಳು ರಕ್ತದಾನ ಮಾಡುವ ಮೂಲಕ ಮುಷ್ಕರವನ್ನು ವಿಭಿನ್ನವಾಗಿ ನಡೆಸಿದರು.
ಪುತ್ತೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಇದರ ವತಿಯಿಂದ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಉಮೇಶ್ ಕವಾಡಿ ಇವರ ನೇತೃತ್ವದಲ್ಲಿ ಹಾಗೂ ಪುತ್ತೂರು ತಾಲೂಕು ಅಧ್ಯಕ್ಷರ ನೇತೃತ್ವ ಮತ್ತು ಪದಾಧಿಕಾರಿಗಳ ಸಹಯೋಗದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ಇವರ ಸಂಪೂರ್ಣ ಸಹಕಾರದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಮುಷ್ಕರದ ಸ್ಥಳದಲ್ಲಿ ರಕ್ತದಾನ ಶಿಬಿರದ ಮೂಲಕ ತಮ್ಮ ಬೇಡಿಕೆಯನ್ನು ಆಗ್ರಹಿಸಿರುವುದು ವಿಶೇಷ.

ತಹಶೀಲ್ದಾರ್ ಪುರಂದರ ಅವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಪುತ್ತೂರು ಸರಕಾರಿ ಆಸ್ಪತ್ರೆಯ ಡಾ.ಜಯದೀಪ್, ರೋಟರಿ ಯುವ ಅಧ್ಯಕ್ಷೆ ಅಶ್ವಿನಿ ಮುಳಿಯ, ರೋಟರಿ ಅಸಿಸ್ಟೆಂಟ್ ಗವರ್ನರ್ ಹರ್ಷ ಕುಮಾರ್ ರೈ ಉಪಸ್ಥಿತರಿದ್ದರು.