ಅಂಬಿಕಾ ವಿದ್ಯಾಲಯದಲ್ಲಿ ನೀಟ್, ಸಿಇಟಿ ಕ್ರ್ಯಾಶ್ ಕೋರ್ಸ್ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ, ಗಣಿತ ತರಗತಿಗಳು

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮುಂಚೂಣಿಯಲ್ಲಿರುವುದು ಶಿಕ್ಷಣಪ್ರೇಮಿಗಳೆಲ್ಲರಿಗೂ ತಿಳಿದಿರುವ ವಿಚಾರ. ಅಂಬಿಕಾ ಪದವಿಪೂರ್ವ ವಿದ್ಯಾಲಯ ತನ್ನ ಆರಂಭದ ದಿನಗಳಿಂದಲೂ ಸಿಇಟಿ, ಜೆಇಇ, ನೀಟ್ ಮುಂತಾದ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಗಮನಾರ್ಹ ಸಾಧನೆ ಮಾಡುತ್ತಿದೆ. ಪ್ರಸಕ್ತ ಸಾಲಿನ ಮೊದಲ ಅವಧಿಯ ಜೆಇಇ ಫಲಿತಾಂಶ ಇತ್ತೀಚೆಗಷ್ಟೇ ಪ್ರಕಟವಾಗಿದ್ದು ಅಂಬಿಕಾ ಪದವಿಪೂರ್ವ ವಿದ್ಯಾಲಯ 99.32 ಪಸೆಂಟೈಲ್ ಫಲಿತಾಂಶದೊಡನೆ ಉತ್ತಮ ಸ್ಥಾನದಲ್ಲಿದೆ.


ಅಂಬಿಕಾ ಪದವಿಪೂರ್ವ ವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ, ಸಾಧನೆಗೈಯುತ್ತಿದ್ದು ನೀಟ್, ಸಿಇಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತು ನೀಡುವುದರ ಜೊತೆಗೆ ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಜಾ ದಿನಗಳ ತರಗತಿಗಳನ್ನು ನಡೆಸುತ್ತಿದೆ. ತನ್ಮೂಲಕ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸುವಲ್ಲಿ ಶ್ರಮವಹಿಸುತ್ತಿದೆ. ಸಂಸ್ಥೆಯ ಈ ಕಾರ್ಯಕ್ಕೆ ಸಾರ್ಥಕತೆ ಎನ್ನುವಂತೆ ಇಲ್ಲಿ ಶಿಕ್ಷಣ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಪ್ರತಿಭೆಯಿಂದ ಮಿಂಚುತ್ತಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಅಂಬಿಕಾ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಇಲಾಖಾ ಪರೀಕ್ಷೆಯ ನಂತರ ಸಿಇಟಿ, ನೀಟ್ ಕ್ರ್ರ್ಯಾಶ್ ಕೋರ್ಸ್ ನಡೆಸಲಾಗುತ್ತಿದ್ದು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ ಹಾಗೂ ಉತ್ತಮ ರ‍್ಯಾಂಕ್ ಗಳಿಸುವಲ್ಲಿ ಈ ತರಬೇತಿ ಸಹಕಾರಿಯಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ತರಗತಿಗಳನ್ನು ನಡೆಸುತ್ತಿದ್ದು ಈ ತರಗತಿಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂತಿಮ ಪರೀಕ್ಷೆಯಲ್ಲಿ 600ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿ ಸಾಧನೆ ಮಾಡುವಲ್ಲಿ ಈ ತರಗತಿಗಳು ಪ್ರಯೋಜನವನ್ನು ಒದಗಿಸಿವೆ.


ಅಂತೆಯೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಬೇಸಿಗೆ ರಜಾ ದಿನಗಳಲ್ಲಿ ತರಗತಿಗಳು ನಡೆಯುತ್ತಿವೆ. ಅಂಬಿಕಾ ವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಈ ವ?ವೂ ನೀಟ್, ಸಿಇಟಿ ಕ್ರ್ರ್ಯಾಶ್ ಕೋರ್ಸ್, ಎಸ್‌ಎಸ್‌ಎಲ್‌ಸಿ ಗಣಿತ, ವಿಜ್ಞಾನ ತರಗತಿಗಳು, ದ್ವಿತೀಯ ಪಿಯುಸಿಯ ತರಗತಿಗಳನ್ನು ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here