ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ-ಅಭಿನಂದನೆ

0

ಜಿಲ್ಲೆಯ ಅತ್ಯುತ್ತಮ ಸಹಕಾರಿ ಸಂಘ; ಶಶಿಕುಮಾರ್ ರೈ ಬಾಲ್ಯೊಟ್ಟು

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಾಲಕೃಷ್ಣ ಬಿ.ಬಾಣಜಾಲು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ರವಿಚಂದ್ರ ಹೊಸವಕ್ಲು ಅವರಿಗೆ ಅಭಿನಂದನಾ ಕಾರ್ಯಕ್ರಮ ಫೆ.14ರಂದು ಬೆಳಿಗ್ಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಳಿಕ ಸಂಘದ ನೆಲ್ಯಾಡಿಯ ಪ್ರಧಾನ ಕಚೇರಿಯಲ್ಲಿ ನಡೆಯಿತು.


ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರೂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರೂ ಆದ ಶಶಿಕುಮಾರ್ ರೈ ಬಾಲೊಟ್ಟು ಅವರು, ಕಳೆದ 30 ವರ್ಷಗಳಿಂದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಉಮೇಶ್ ಶೆಟ್ಟಿಯವರು ಸಂಘವನ್ನು ಉನ್ನತ ಮಟ್ಟಕ್ಕೆ ಏರಿಸಿದ್ದಾರೆ. ಕಳೆದ 8 ವರ್ಷಗಳಿಂದ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ ಅತ್ಯುತ್ತಮ ಸಹಕಾರಿ ಸಂಘವಾಗಿ ಗುರುತಿಸಿಕೊಂಡು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಪಡೆದುಕೊಳ್ಳುತ್ತಿದೆ. ಇದೀಗ ನೂತನವಾಗಿ ಆಯ್ಕೆಗೊಂಡಿರುವ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರೂ ಸಂಘವನ್ನು ಇನ್ನಷ್ಟೂ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕೆಂದು ಹೇಳಿದರು. ಚುನಾವಣಾಧಿಕಾರಿಯಾಗಿದ್ದ ಮಂಗಳೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಅಧೀಕ್ಷಕ ನಾಗೇಂದ್ರ ಬಿ., ಸಂಘದ ಕಾನೂನು ಸಲಹೆಗಾರರಾದ ಶಿವಪ್ರಸಾದ್ ಇ., ಸಂಘದ ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ, ಮಾಜಿ ಅಧ್ಯಕ್ಷ ಎನ್.ವಿ.ವ್ಯಾಸ, ಹಾಲಿ ನಿರ್ದೇಶಕ ಸರ್ವೋತ್ತಮ ಗೌಡ ಅವರು ಸಂದರ್ಭೋಚಿತವಾಗಿ ಮಾತನಾಡಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭಹಾರೈಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಾಲಕೃಷ್ಣ ಬಾಣಜಾಲು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ರವಿಚಂದ್ರ ಹೊಸವಕ್ಲು ಅವರು ಮಾತನಾಡಿ ಎಲ್ಲರ ಸಹಕಾರ ಕೋರಿದರು.


ನೂತನ ನಿರ್ದೇಶಕರಾದ ಜಯಾನಂದ ಬಂಟ್ರಿಯಾಲ್, ಉಷಾ ಅಂಚನ್, ಜಿನ್ನಪ್ಪ ಗೌಡ ಮಿತ್ತಪರಕೆ, ಜನಾರ್ದನ ಗೌಡ ಬರೆಮೇಲು, ಸುಧಾಕರ ಗೌಡ ಬಾಗಿಲುಗದ್ದೆ ಶಿರಾಡಿ, ಶೇಷಮ್ಮ ಪೈಸಾರಿ, ಹರೀಶ್ ನುಜೂಲು, ಬಾಬು ನಾಯ್ಕ್, ಭಾಸ್ಕರ ರೈ ತೋಟ, ಎಸ್‌ಸಿಡಿಸಿಸಿ ಬ್ಯಾಂಕ್‌ನ ವಲಯ ಮೇಲ್ವಿಚಾರಕ ಎಸ್.ವಸಂತ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಕಮಲಾಕ್ಷ ಪಂಡಿತ್, ಮಾಜಿ ನಿರ್ದೇಶಕರಾದ ಸುದರ್ಶನ್ ಶಿರಾಡಿ, ಅಣ್ಣು, ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಆನಂದ ಪಿಲವೂರು, ಶ್ರೀಲತಾ ಮಾದೇರಿ, ಬಿಜೆಪಿ ನೆಲ್ಯಾಡಿ ಮಹಾಶಕ್ತಿಕೇಂದ್ರದ ಕಾರ್ಯದರ್ಶಿ ರಾಮಚಂದ್ರ ನಾಯ್ಕ್ ಏಣಿತ್ತಡ್ಕ, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಐತ್ತೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಸತೀಶ್ ಕೆ.ಐತ್ತೂರು, ನೆಲ್ಯಾಡಿ ಬೆಥನಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ರೆ.ಫಾ.ವರ್ಗೀಸ್ ಕೈಪನಡ್ಕ, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಉದಯಕುಮಾರ್ ದೋಂತಿಲ, ಮಾಜಿ ಅಧ್ಯಕ್ಷರಾದ ಲೋಕೇಶ್ ಬಾಣಜಾಲು, ಇಬ್ರಾಹಿಂ ಎಂ.ಕೆ., ನೆಲ್ಯಾಡಿ ಕಟ್ಟಡ ಮಾಲಕರ ಸಂಘದ ಮಾಜಿ ಅಧ್ಯಕ್ಷ ಒ.ಜಿ.ನೈನಾನ್, ಎಪಿಎಂಸಿ ಮಾಜಿ ನಿರ್ದೇಶಕ ಕುಶಾಲಪ್ಪ ಗೌಡ ಅನಿಲ, ರಮೇಶ್ ಶೆಟ್ಟಿ ಬೀದಿ, ಉಮೇಶ್ ಪೂಜಾರಿ, ಸೆಬಾಸ್ಟಿಯನ್ ಮಾದೇರಿ, ಸದಾನಂದ ಕುಂಡಡ್ಕ, ಜನಾರ್ದನ ಬಾಣಜಾಲು, ಜಯರಾಮ ಬಾಣಜಾಲು ಸಹಿತ ಹಲವು ಮಂದಿ ನೂತನ, ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾರಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ದಯಾಕರ ರೈ ಸ್ವಾಗತಿಸಿದರು. ವ್ಯವಸ್ಥಾಪಕ ರಮೇಶ್ ವಂದಿಸಿದರು. ರತ್ನಾಕರ ಬಂಟ್ರಿಯಾಲ್ ನಿರೂಪಿಸಿದರು. ಸಿಬ್ಬಂದಿ ಧನುಷ್ ಪ್ರಾರ್ಥಿಸಿದರು.

ಸನ್ಮಾನ:
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು, ಚುನಾವಣಾಧಿಕಾರಿಯಾಗಿದ್ದ ಬಿ.ನಾಗೇಂದ್ರ, ನಿಕಟಪೂರ್ವ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ಅವರನ್ನು ಸಂಘದ ನೂತನ ನಿರ್ದೇಶಕರು ಸನ್ಮಾನಿಸಿ ಗೌರವಿಸಿದರು. ಸಂಘದ ಸಿಬ್ಬಂದಿಗಳು ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಿಗೆ ಗೌರವಾರ್ಪಣೆ ಸಲ್ಲಿಸಿದರು.

LEAVE A REPLY

Please enter your comment!
Please enter your name here