ನಾಳೆ ಕೊಕ್ಕಡದಲ್ಲಿ ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ

0

ನೆಲ್ಯಾಡಿ: ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 5ನೇ ಕೊಕ್ಕಡ ಶಾಖೆ ಫೆ.16ರಂದು ಬೆಳಿಗ್ಗೆ ಕೊಕ್ಕಡ ವೈಷ್ಣವಿ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಪಾಲೇರಿ, ಉಪಾಧಕ್ಷ ಶೀನಪ್ಪ ಪೂಜಾರಿ ಹೂವಿನಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡೀಕಯ್ಯ ಬಿ. ಹಾಗೂ ನಿರ್ದೇಶಕರು ತಿಳಿಸಿದ್ದಾರೆ.


ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರು ಶಾಖೆ ಉದ್ಘಾಟಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ನೂತನ ಕಚೇರಿ ಉದ್ಘಾಟಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ ಬಿ.ಸಿ.ರೋಡು ಇದರ ಅಧ್ಯಕ್ಷರಾದ ಸಂಜೀವ ಪೂಜಾರಿ ಬೊಳ್ಳಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಅವರು ಠೇವಣಿ ಪತ್ರ ಬಿಡುಗಡೆಗೊಳಿಸಲಿದ್ದಾರೆ. ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ ಅಮೃತಾ ನಿಧಿ ಯೋಜನೆ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೊಕ್ಕಡ ಸಂತ ಜೋನರ ಬ್ಯಾಪ್ಟಿಸ್ಟ್ ದೇವಾಲಯದ ಧರ್ಮಗುರು ಫಾ.ಅನಿಲ್ ಪ್ರಕಾಶ್ ಡಿ.ಸಿಲ್ವಾ, ಕೊಕ್ಕಡ ಬದ್ರಿಯಾ ಜುಮಾ ಮಸೀದಿ ಖತೀಬರಾದ ಎ.ಆರ್.ಸುಲ್ತಾನ್ ದಾರಿಮಿ ರೆಂಜಿಲಾಡಿ, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ.ಸದಾನಂದ ಕುಂದರ್, ಉಪ್ಪಿನಂಗಡಿ ಅದ್ವಿಕ್ ಮಲ್ಟಿಸ್ಪೆಷಾಲಿಟಿ ದಂತ ಚಿಕಿತ್ಸಾಲಯದ ವೈದ್ಯರಾದ ಡಾ.ಶ್ವೇತಾ ಆಶಿತ್, ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ದೋಂತಿಲ, ಕೊಕ್ಕಡ ಗ್ರಾ.ಪಂ.ಅಧ್ಯಕ್ಷೆ ಬೇಬಿ ವಸಂತ್, ಕೊಕ್ಕಡ ವೈಷ್ಣವಿ ಕಾಂಪ್ಲೆಕ್ಸ್ ಮಾಲಕ ರಾಜಾರಾಮ್ ಹೆಬ್ಬಾರ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here