ಪಟ್ಟೆ ಶ್ರೀಕೃಷ್ಣ ಹಿ.ಪ್ರಾ.ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

0

ಬಡಗನ್ನೂರು: ಪಟ್ಟೆ ಶ್ರೀಕೃಷ್ಣ ಹಿ.ಪ್ರಾ. ಶಾಲೆಗೆ  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡಮಾಡಿದ ಬೆಂಚ್ ಮತ್ತು ಡೆಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಭಟ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ಶುಭ ಹಾರೈಸಿದರು.

ವಲಯದ ಮೇಲ್ವಿಚಾರಕ ಹರೀಶ್ ಕುಲಾಲ್ ಹಾಗೂ ಒಕ್ಕೂಟದ ಸದಸ್ಯರು  ಬೆಂಚ್ ಮತ್ತು ಡೆಸ್ಕನ್ನು  ಶಾಲಾ ಮುಖ್ಯ ಶಿಕ್ಷಕ ಮತ್ತು ಶಾಲಾಭಿವೃದ್ಧಿ ಸಮಿತಿ ಸದಸ್ಯರಿಗೆ ಹಸ್ತಾಂತರ ಮಾಡಿದರು.

ಅರಿಯಡ್ಕ ವಲಯದ ಮೇಲ್ವಿಚಾರಕ ಹರೀಶ್ ಕುಲಾಲ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಪಟ್ಟೆ ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ,ಕಾರ್ಯದರ್ಶಿ ಶೋಭಿತಾ ತುಳಸಿಯಡ್ಕ, ಮಾಜಿ ಅಧ್ಯಕ್ಷೆ  ವಸಂತಿ   ಸದಸ್ಯರಾದ ವೀಣಾ ನಾಯಕ್, ಎಸ್ ಎಲ್ ನಾರಾಯಣ, ಗಣೇಶ್ ರೈ ಅರೆಪ್ಪಾಡಿ, ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ ಸೇವಾ ಪ್ರತಿನಿಧಿ ಸಾವಿತ್ರಿ ಪೊನ್ನೆತ್ತಡ್ಕ. ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here