ನೆಲ್ಯಾಡಿ: ಬಜತ್ತೂರು ಗ್ರಾಮದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಜಾತ್ರೆಯ ಪ್ರಯುಕ್ತ ಫೆ.13ರಂದು ರಾತ್ರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಂಜೆ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರಣಮ್ಯ ಭಟ್(ಹಾಡುಗಾರಿಕೆ), ಅನುಶ್ರೀ ಮಳಿ(ವಯಲಿನ್)ಹಾಗೂ ತಮನ್ ಎಕ್ಕಡ್ಕ (ಮೃದಂಗ) ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ಹೊಸಗದ್ದೆ ಹಾಗೂ ಅಯೋಧ್ಯಾನಗರ ಸರಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯತು.
ಸನ್ಮಾನ:
ಗ್ರಾಮದ ಸಾಧಕ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಶ್ರವಣ್ ಕೆ.ಎ., ಚರಣ್ ಎಸ್., ಪ್ರಣಮ್ಯ ಭಟ್, ಆದ್ವಿತ್ ಹಾಗೂ ಧನ್ಯಶ್ರೀಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಕಾಂಚನ ರೋಹಿಣಿ ಸುಬ್ಬರತ್ನಂ, ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀಧರ ಗೌಡ ಶ್ರೀಹರಿ ನಡ್ಪ, ಉಪಾಧ್ಯಕ್ಷ ಶಿವರಾಮ ಕಾರಂತ ಉರಾಬೆ, ಕಾರ್ಯದರ್ಶಿ ಸುಧಾಕೃಷ್ಣ ಪಿ.ಎನ್.ನೆಕ್ಕರಾಜೆ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು. ಉಪನ್ಯಾಸಕ ಮೋಹನಚಂದ್ರ ತೋಟದ ಮನೆ ಸ್ವಾಗತಿಸಿ, ನಿರೂಪಿಸಿದರು.