ತಾಲೂಕು ಯುವ ಬಂಟರ ಸಂಘದ ಸಾರಥ್ಯದ “ಪುತ್ತೂರ್ದ ಬಂಟ ಜವನೆರೆ ಗೊಬ್ಬು” ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಸಾರಥ್ಯದಲ್ಲಿ ಸಹಕಾರಿ ಧುರೀಣ ದಿ. ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಫೆ. 22 ಮತ್ತು 23 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಪುತ್ತೂರ್ದ ಬಂಟ ಜವನೆರೆ ಗೊಬ್ಬು, ಬಂಟ್ಸ್ ಪ್ರೀಮಿಯರ್ ಲೀಗ್-2025, ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಅಮಂತ್ರಣ ಪತ್ರ ಬಿಡುಗಡೆ ಫೆ.15 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು ಅತಿಥಿಗಳನ್ನು ಸ್ವಾಗತಿಸಿ, ಕಾರ‍್ಯಕ್ರಮದ ಉದ್ದೇಶವನ್ನು ತಿಳಿಸಿದರು. ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ಉಪಾಧ್ಯಕ್ಷ ರಮೇಶ್ ರೈ ಡಿಂಬ್ರಿ, ದಯಾನಂದ ರೈ ಕೊರ್ಮಂಡ, ಗಣೇಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಶಶಿರಾಜ್ ರೈ ಮುಂಡಾಳಗುತ್ತು, ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ಜಗಜೀವನ್‌ದಾಸ್ ರೈ ಚಿಲ್ಮೆತ್ತಾರು, ಮೋಹನ್ ರೈ ನರಿಮೊಗರು, ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ‍್ಯದರ್ಶಿ ರಂಜಿನಿ ಶೆಟ್ಟಿ, ಕ್ರೀಡಾ ಸಂಚಾಲಕ ಕಾರ್ತಿಕ್ ರೈ, ತಾಲೂಕು ಮಹಿಳಾ ಬಂಟರ ಸಂಘದ ಗೌರವಾಧ್ಯಕ್ಷೆ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಅಧ್ಯಕ್ಷೆ ಗೀತಾ ಮೋಹನ್ ರೈ, ಕಾರ‍್ಯದರ್ಶಿ ಕುಸುಮ ಪಿ.ಶೆಟ್ಟಿ, ಕೋಶಾಧಿಕಾರಿ ಅರುಣಾ ರೈ ಹಾಗೂ ಯುವ ಬಂಟರ, ಬಂಟರ ಸಂಘ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಪದಾಧಿಕಾರಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here