ಮಾ.5ರ ಒಳಗಾಗಿ ವೇತನ ಪಾವತಿಯಾಗದಿದ್ದರೆ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಿಷ್ಟ ಅವಧಿ ಮುಷ್ಕರ
ಪುತ್ತೂರು:ನೋಂದಣಿ ಹಾಗೂ ಉಪ ನೋಂದಣಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ) ಹೊರಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳ ಬೇಡಿಕೆಗಳನ್ನು 7 ದಿನದ ಒಳಗಾಗಿ ಈಡೇರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಫೆ.17ರಿಂದ ಕರೆ ನೀಡಿರುವ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ.
ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೋಂದಣಿ ಹಾಗೂ ಉಪ ನೋಂದಣಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ) ಹೊರಗುತ್ತಿಗೆ ಕಂಪ್ಯೂಟರ್ ಆಪರೇಟರ್‌ಗಳ ಫೆ.17ರಿಂದ ಮುಷ್ಕರ ನಡೆಸುವುದಾಗಿ ರಾಜ್ಯ ಸಂಘದಿಂದ ಕರೆ ನೀಡಲಾಗಿತ್ತು. ಫೆ.15ರಂದು ಇಲಾಖೆ ನೋಂದಣಿ ಮಹಾಪರಿವೀಕ್ಷಕರಿಗೆ ಸಂಘದಿಂದ ನೀಡಿದ ಮನವಿ ಪತ್ರಕ್ಕೆ ಕಾನೂನಾತ್ಮಕವಾಗಿ ಸ್ಪಂಧನೆ ನೀಡಿದ್ದು 7 ದಿನಗೊಳಗೆ ಬೇಡಿಕೆ ಈಡೇರಿಸುವುಲ್ಲದೆ ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸಕ್ಕೆ ಹಾಜರಾಗಲು ವಿನಂತಿಸಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂತೆಗೆದುಕೊಳ್ಳಲಾಗಿದೆ. ಮಾ.5ರ ಒಳಗಾಗಿ ವೇತನ ಆಗದಿದ್ದರೆ ನಂತರ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವು ಎಂದು ರಾಜ್ಯಾಧ್ಯಕ್ಷ ಬಸವರಾಜ್ ಎಚ್ ತಿಳಿಸಿದ್ದಾರೆ.