*ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು
*ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ ಸೇರಿದಂತೆ ವಿವಿಧ ವಿಷಯಗಳಲ್ಲಿ ವಿಶೇಷ ತರಬೇತಿ
ಪುತ್ತೂರು: “ಶಿಕ್ಷಣವೆಂದರೆ ಮನುಷ್ಯನಲ್ಲಿ ಹುದುಗಿರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು” ಇದು ಸ್ವಾಮಿ ವಿವೇಕಾನಂದರ ದೃಷ್ಟಿಕೋನ. ಈ ಹಿನ್ನೆಲೆಯಲ್ಲಿ ಕಳೆದ ಆರು ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ವತೋಮುಖ ವ್ಯಕ್ತಿತ್ವ ಬೆಳವಣಿಗೆಗೆ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಸಹಕರಿಸುತ್ತಾ ಬಂದಿದೆ. ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗೆ ವೇದಿಕೆ ನೀಡುತ್ತಾ ವಿದ್ಯಾರ್ಥಿಗಳ ಸಾಧನೆಗೆ ದಾರಿದೀಪವಾಗಿ ಕಾಲೇಜು ಮನೆಮಾತಾಗಿದೆ.
ಪುತ್ತೂರಿನ ನೆಹರು ನಗರದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು ಯುರೇಕಾ ಎಂಬ ಶಿಬಿರವನ್ನು ಆಯೋಜಿಸುತ್ತಾ ಬಂದಿದ್ದು, ಈ ವರ್ಷ ಏಪ್ರಿಲ್ 7 ರಿಂದ 12 ರ ವರೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಯುರೇಕಾ-2025 ನಡೆಯಲಿದೆ. ಆರು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳು ಅವಧಿಗಳನ್ನು ನಡೆಸಿಕೊಡಲಿದ್ದಾರೆ.
ಏಪ್ರಿಲ್ 7 ರಿಂದ ಆರಂಭಗೊಂಡು ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 3.30 ರ ವರೆಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ, ತಂತ್ರಜ್ಞಾನ, ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಹತ್ತು ಹಲವು ವಿಷಯಗಳ ಬಗ್ಗೆ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು ನಡೆಯಲಿವೆ. ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳನ್ನೊಳಗೊಂಡಂತೆ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆಯಿದ್ದು, ದೂರದೂರುಗಳಿಂದ ಆಗಮಿಸುವ ಶಿಬಿರಾರ್ಥಿಗಳಿಗೆ ಕಾಲೇಜಿನ ವತಿಯಿಂದ ಉಚಿತ ವಸತಿ ವ್ಯವಸ್ಥೆಯನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ಜಾಲತಾಣ www.vivekanandapuc.com ನಲ್ಲಿ ತಮ್ಮ ಹೆಸರನ್ನು ಏಪ್ರಿಲ್ 5 ರ ಒಳಗಾಗಿ ನೊಂದಾಯಿಸಬಹುದಾಗಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9844665385, 8904791909, 8971634042 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.