ಪುತ್ತೂರು:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವು ವಿಟ್ಲ ಮೇಗಿನಪೇಟೆ ಪ್ರಾ. ಶಾಲೆಯಲ್ಲಿ ಆರಂಭವಾಯಿತು.
ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಯ್ಯ ಕೆ ವಿಟ್ಲ ಅರಮನೆ ಇವರು ಉದ್ಘಾಟಿಸಿ ,ಶಿಬಿರದಲ್ಲಿನ ಪಾಲ್ಗೊಳ್ಳುವಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವುದಲ್ಲದೆ ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ, ಎನ್ಎಸ್ಎಸ್ ನಂತಹ ಶಿಬಿರಗಳು ವಿದ್ಯಾರ್ಥಿಗಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಒಂದು ಉತ್ತಮ ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕೆಂದು ತಿಳಿಸಿದರು.
ಅತಿಥಿಗಳಾಗಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜಯಂತಿ ,ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಮಾತನಾಡಿ ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ಕುಮಾರ್ ರೈ ಪ್ರಾಸ್ತವಿಕ ಮಾತುಗಳನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮೇಘಶ್ರೀ ಯೋಜನಾಧಿಕಾರಿ ಸ್ವಾಗತಿಸಿ, ಘಟಕ ನಾಯಕ ಅಖಿಲೇಶ್ ವಂದಿಸಿ, ಸ್ವಯಂ ಸೇವಕರಾದ ಕೀರ್ತನ್ಕೃಷ್ಣ ಪ್ರಾರ್ಥಿಸಿ , ವಿಂದುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಆಡಳಿತ ನಿರ್ದೇಶಕಿ ಕಲಾವತಿ ಜಯಂತ ಆಡಳಿತಾಧಿಕಾರಿ ಅರ್ಪಿತ್. ಟಿ.ಎ ಘಟಕ ನಾಯಕ ರಾಕೇಶ್ ಹಾಗೂ ನಾಯಕಿ ಶ್ರುತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.