
ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವ ಮಾ.14 ರಿಂದ ಮಾ.24 ರ ತನಕ ನಡೆಯಲಿದ್ದು ಜಾತ್ರೋತ್ಸವ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ .ಕೆಯವರು ಬಿಡುಗಡೆ ಮಾಡಿದರು.
ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು, ರಾಮಕುಂಜ ಗ್ರಾ.ಪಂ ಅಧ್ಯಕ್ಷರಾದ ಸುಚೇತಾ,ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸುಶೀಲ ಸೇರಿದಂತೆ ವ್ಯವಸ್ಥಾಪನ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು ,ಭಕ್ತಾದಿಗಳು, ದೇವಸ್ಥಾನದ ಆರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.