ಆಲಂಕಾರು: ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಇವರ ಆಶ್ರಯದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಮತ್ತು ವಿಶೇಷಚೇತನರಿಗೆ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ಫೆ.18ರಂದು ಆಲಂಕಾರು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.
ಆಲಂಕಾರು, ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಡೋಸಲ್ಫಾನ್ ಸಂತ್ರಸ್ತರು ಮತ್ತು ವಿಶೇಷಚೇತನರು ಶಿಬಿರದ ಪ್ರಯೋಜನ ಪಡೆದುಕೊಂಡರು. ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಿನಿ, ಆಲಂಕಾರು, ಕುಂತೂರು, ಪೆರಾಬೆಯ ಆಶಾಕಾರ್ಯಕರ್ತೆಯರು, ಆಲಂಕಾರು ಗ್ರಾ.ಪಂ.ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋನಪ್ಪ ಬಿ., ಪೆರಾಬೆ ಗ್ರಾ.ಪಂ.ನ ಪುನರ್ವಸತಿ ಕಾರ್ಯಕರ್ತ ಮುತ್ತಪ್ಪ ಬಿ., ಉಪಸ್ಥಿತರಿದ್ದರು.