ಪುತ್ತೂರು: ಬಿರುಮಲೆ ಬೆಟ್ಟ ಅಭಿವೃದ್ಧಿ ಯೋಜನೆಯಿಂದ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ರ ನವತಿ ಸಂಭ್ರಮದ ನೆನಪಿನ ಕೊಡುಗೆಯ ವೀಕ್ಷಣಾ ಮಂಟಪದ ಉದ್ಘಾಟನೆಯು ಫೆ.20 ರಂದು ಬಿರುಮಲೆ ಬೆಟ್ಟ ಗಾಂಧಿ ಮಂಟಪದ ಎದುರು ನಡೆಯಲಿದೆ.
ಕೃಷಿಕರು ಹಾಗೂ ಉದ್ಯಮಿಗಳಾದ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗೌರವ ಉಪಸ್ಥಿತಿಯಾಗಿ ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು, ದ.ಕ.ಜಿ.ಸ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಹಾಗೂ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ರವರ ನವತಿ ಸಂಭ್ರಮದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ತಹಶಿಲ್ದಾರ್ ಪುರಂದರ ಹೆಗ್ಡೆ, ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ರವರು ಉಪಸ್ಥಿತಲಿದ್ದಾರೆ ಎಂದು ಬಿರುಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ಅಧ್ಯಕ್ಷ ಎ.ಜಗಜೀವನ್ ದಾಸ್ ರೈ, ಕಾರ್ಯದರ್ಶಿ ನಿತಿನ್ ಪಕ್ಕಳ, ಪದಾಧಿಕಾರಿಗಳು, ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.