ರಾಮಕುಂಜ: ರಾಮಕುಂಜ ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಫೆ.20ರಂದು ಬೆಳಿಗ್ಗೆ 10.30ಕ್ಕೆ ರಾಮಕುಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಕಡಬ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು(ಪಂ.ರಾಜ್) ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದಾರೆ. ಗ್ರಾಮಸಭೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬಿ., ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಪಿಡಿಒ ಮೋಹನಕುಮಾರ್ ಜಿ.,ಹಾಗೂ ಕಾರ್ಯದರ್ಶಿ ಲಲಿತ ಜಿ.ಡಿ.ತಿಳಿಸಿದ್ದಾರೆ.