ನೆಲ್ಯಾಡಿ : ಒಂದೂವರೇ ತಿಂಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿಯ ಯುವಕ ಫೆ.19ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ನೆಲ್ಯಾಡಿ ಗ್ರಾಮದ ಪುಚ್ಚೇರಿ ನಿವಾಸಿ ವಸಂತ ಪಿ ಹಾಗೂ ಶ್ರೀಮತಿ ಕೇಸರಿ ದಂಪತಿ ಪುತ್ರ ಚೇತನ್ ಪಿ ವಿ (24ವ.) ಮೃತ ಪಟ್ಟ ಯುವಕ. ಈತ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು, ಡಿ.24 ರಂದು ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಫೆ. 19 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚೇತನ್ ಅವರು ವಸಂತ ಹಾಗೂ ಶ್ರೀಮತಿ ಕೇಸರಿ ದಂಪತಿಯ ಏಕೈಕ ಪುತ್ರ.