ಅಕ್ರಮ ಸಕ್ರಮ ಆ್ಯಪ್ ಸಮಸ್ಯೆ, ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ನೀಡಿ ಸಹಕರಿಸುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿಯಲ್ಲಿ ಸರ್ವರ್ ಬ್ಯುಸಿ ಮತ್ತು ಆ್ಯಪ್ ಸಮಸ್ಯೆ ಗೆ ಪರಿಹಾರ ಕಂಡುಕೊಳ್ಳುವುದು ಮತ್ತು ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟ್ಯಾಪ್ ನೀಡಿ ಕಡತ ವಿಲೇವಾರಿಯಲ್ಲಿ ವೇಗತೆ ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಕಂದಾಯ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬುಧವಾರ ಮನವಿ ಸಲ್ಲಿಸಿದ್ದಾರೆ.


ಕಂದಾಯ ಇಲಾಖೆಯ ಮುಖ್ಯ ಕಚೇರಿಗೆ ಭೇಟಿ ನೀಡಿ ಕಂದಾಯ ಇಲಾಖೆಯ ಕಾರ್ಯದರ್ಶಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು ಕಂದಾಯ ಇಲಾಖೆಯಲ್ಲಿರುವ ಕೆಲವೊಂದು ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದರು. ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವಲ್ಲಿ ಆ್ಯಪ್ ನಿಂದ ಸಮಸ್ಯೆ ಉಂಟಾಗುತ್ತಿದ್ದು , ಸರ್ವರ್ ಬ್ಯುಸಿ ಬರುವ ಕಾರಣ ಸಕಾಲಕ್ಕೆ ಕಡತವನ್ನು ವಿಲೇವಾರಿ ಮಾಡುವಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರವೇ ಪರಿಹಾರ ಮಾಡುವಂತೆ ಮನವಿ ಮಾಡಿದರು.

ವಿ ಎ ಗಳಿಗೆ ಲ್ಯಾಪ್‌ಟ್ಯಾಪ್ ಕೊಡಿ
ಗ್ರಾಮಗಳಲ್ಲಿ ಗ್ರಾಮಾಡಳಿತಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ವಿ ಎ ಗಳಿಗೆ ಲ್ಯಾಪ್‌ಟ್ಯಾಪ್ ನೀಡುವಂತೆಯೂ ಶಾಸಕರು ಮನವಿ ಸಲ್ಲಿಸಿದರು. ಮೂಲಭೂತ ಅವಶ್ಯಕತೆಗಳ ಈಡೇರಿಕೆಗಾಗಿ ವಿ ಎಗಳು ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸಿದ್ದು ಅವರ ಕನಿಷ್ಠ ಬೇಡಿಕೆಯನ್ನು ಈಡೇರಿಸುವಂತೆ ಶಾಸಕರು ಮನವಿ ಮಾಡಿದರು. ವಿ ಎ ಗಳಿಗೆ ಲ್ಯಾಪ್ ನೀಡಿದ್ದಲ್ಲಿ ಕಂದಾಯ ಇಲಾಖೆಯ ಕಡತಗಳನ್ನು ವಿಲೇವಾರಿ ಮಾಡಲು ಸುಲಭವಾಗುತ್ತದೆ ಮತ್ತು ಕೆಲಸದಲ್ಲಿ ವೇಗತೆಯನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಕಂದಾಯ ಇಲಾಖೆ ಡಿಜಿಟಲೀಕರಣ ಆಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿ ಎ ಗಳಿಗೆ ಲ್ಯಾಪ್ ಟ್ಯಾಪ್ ನೀಡುವ ಅವಶ್ಯಕತೆ ಇದ್ದು ಅದನ್ನು ಸರಕಾರ ಪೂರೈಸಬೇಕು ಎಂದು ಕಂದಾಯ ಕಾರ್ಯದರ್ಶಿಗೆ ಶಾಸಕರು ಮನವಿ ಸಲ್ಲಿಸಿದರು.

ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನ: ವೈದ್ಯಕೀಯ ಸಚಿವರ ಭೇಟಿ
ಮುಂದಿನ ತಿಂಗಳು ನಡೆಯಲಿರುವ ಬಿಜೆಟ್ ಅಧಿವೇಶನದಲ್ಲಿ ಪುತ್ತೂರಿನ ಮೆಡಿಕಲ್ ಕಾಲೇಜಿಗೆ ಅನುದಾನ ಮೀಸಲಿಡುವಂತೆ ಆಗ್ರಹಿಸಿ ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ಪ್ರಕಾಶ್ ಪಾಟೀಲ್ ರವರಿಗೆ ಮನವಿ ಸಲ್ಲಿಸಿದರು.


ಸಚಿವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾದ ಶಾಸಕರು, ಕಳೆದ ಬಾರಿಯ ಬಜೆಟ್ ವೇಳೆ ಇದೇ ವಿಷಯವನ್ನು ಪ್ರಸ್ತಾಪಿಸಿದ್ದು ಮುಖ್ಯಮಂತ್ರಿಗಳಿಗೂ ಮನವಿ ಮಾಡಿದ್ದೆ. ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜಿಗೆ ಅನುದಾನ ಮೀಸಲಿಡುವಂತೆಯೂ ಶಾಸಕರು ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here