ನಿಡ್ಪಳ್ಳಿ; ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.12,13 ರಂದು ನಡೆಯಲಿದ್ದು ಅದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫೆ.20 ರಂದು ಗರಡಿ ವಠಾರದಲ್ಲಿ ನಡೆಯಿತು.
ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬಿಡುಗಡೆಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಅಲ್ಲದೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇಲ್ಲಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರವನ್ನೂ ಇಲ್ಲಿ ಸಾಂಕೇತಿಕವಾಗಿ ಬಿಡುಗಡೆ ಮಾಡಲಾಯಿತು.ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿಯ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಮಾತನಾಡಿ, ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆಯುವ ಜಾತ್ರೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರ್ವ ವಿಧದ ಸಹಕಾರ ನೀಡುವಂತೆ ವಿನಂತಿಸಿದರು.
ಕರ್ನಪ್ಪಾಡಿ ಗರಡಿಯ ಸೇವಾ ಸಮಿತಿ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು ಪ್ರಾರ್ಥನೆ ಸಲ್ಲಿಸಿದರು. ಸೇವಾ ಸಮಿತಿ ಕಾರ್ಯದರ್ಶಿ ಮಾಧವ ಪೂಜಾರಿ ರೆಂಜ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ರೈ, ಕರ್ನಪ್ಪಾಡಿ ಮನೆಯವರು, ಸೇವಾ ಸಮಿತಿ ಸದಸ್ಯರು, ಕೋಟಿ ಚೆನ್ನಯ ಯುವಕ ಮಂಡಲದ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.ಭಾಸ್ಕರ ಕರ್ಕೇರ ಸ್ವಾಗತಿಸಿ ವಂದಿಸಿದರು.