ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರ, ಪದಾಧಿಕಾರಿಗಳ ಮತ್ತು ಸೇವಾಪ್ರತಿನಿಧಿಗಳ ಸಭೆಯು ಫೆ.18ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ನೆಲ್ಯಾಡಿ ವಲಯದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸುರಕ್ಷಾ ವಿಭಾಗದ ಯೋಜನಾಧಿಕಾರಿ ನಾರಾಯಣರವರು 2025-26ನೇ ಸಾಲಿನ ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಕಡಬ ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಗೌಡ ಎನ್.ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ, 2025-26 ನೇ ಸಾಲಿನ ವಾರ್ಷಿಕ ಹಿಡುವಳಿ ಯೋಜನೆ ಹಾಗೂ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ವಲಯ ಮೇಲ್ವಿಚಾರಕ ಆನಂದ ಡಿ.ಬಿ.ಪ್ರಾಸ್ತಾವಿಕ ಮಾತನಾಡಿದರು. ಸೇವಾಪ್ರತಿನಿಧಿ ಸುಮಿತ್ರಾ ಕಾರ್ಯಕ್ರಮ ನಿರೂಪಿಸಿದರು. ಹೇಮಾವತಿ ಜೆ ಸ್ವಾಗತಿಸಿದರು. ಮೋಹಿನಿ ವಂದಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.