ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ ಫೆ.22ರಂದು ಪೂರ್ವಾಹ್ನ 9:30ಕ್ಕೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್. ಕೆ. ಜಗನ್ನಿವಾಸ ರಾವ್ ವಹಿಸಲಿದ್ದಾರೆ. ಶಾಲಾ ಸಂಚಾಲಕ ಅತೀ ವಂ. ಲಾರೆನ್ಸ್ ಮಸ್ಕರೇನಸ್ ಆಶೀರ್ವಚನ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ದಂತ ವೈದ್ಯ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿ ಡಾ.ಪ್ರಕಾಶ್ ಆಗಮಿಸಲಿದ್ದಾರೆ.
ಶಾಲಾ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕೆಂದು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್. ಕೆ. ಜಗನ್ನಿವಾಸ ರಾವ್, ಉಪಾಧ್ಯಕ್ಷ ಜಾನ್ ಕುಟಿನ್ಹ, ಮುಖ್ಯಗುರು ವಂ. ಮ್ಯಾಕ್ಸಿo ಡಿಸೋಜಾ ಹಾಗೂ ಕಾರ್ಯದರ್ಶಿ ಬೆನೆಟ್ ಮೊಂತೆರೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.