ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಜಿಲ್ಲೆಯ ವತಿಯಿಂದ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ರವರ ಜನ್ಮ ಜಯಂತಿಯ ಪ್ರಯುಕ್ತ ಫೆ.23ರಂದು ಮಧ್ಯಾಹ್ನ 3 ಗಂಟೆಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಯುವ ಸಮಾವೇಶ ನಡೆಯಲಿದೆ.
ಆರಂಭದಲ್ಲಿ ವಿಟ್ಲ ಬಸದಿಯಿಂದ ದೇವಸ್ಥಾನದ ವಠಾರದ ವರೆಗೆ ಮೆರವಣಿಗೆ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ವಿಭಾಗ ಪ್ರಮುಖ್ ಕೇಶವ ಬಂಗೇರರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.