ಸವಣೂರು: ಮಂಗಳೂರಿನ ಪಂಪ್‌ವೆಲ್ ನಲ್ಲಿರುವ ಸರ್ವಜ್ಞ ಅಕಾಡೆಮಿಯ ನಿರ್ದೇಶಕರಾದ ಸುರೇಶ್ ಎಂ.ಎಸ್ ರವರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವನ್ನು ತೆರೆಯುವ ಇಚ್ಚೆಯನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ನ್ಯಾಯವಾದಿ ಅಶ್ವಿನ್.ಎಲ್.ಶೆಟ್ಟಿಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ತಿಳಿಸಿ ಅದರ ಸದುಪಯೋಗವನ್ನು ಪಡೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆಯನ್ನು ನೀಡಿದರು. ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀ ಎಸ್ ರೈ, ಉಪಪ್ರಾಂಶುಪಾಲರಾದ ಶೇಷಗಿರಿ ಎಂ ಉಪಸ್ಥಿತರಿದ್ದರು. ಬಿ.ಸಿ.ಎ ವಿಭಾಗದ ಮುಖ್ಯಸ್ಥರಾದ ಪ್ರತಿಭಾ ಭಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮದ ನಿರೂಪಣೆಗೈದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಶಿವಪ್ರಸಾದ್ ಕೆ.ಆರ್ ವಂದನಾರ್ಪಣೆಗೈದರು.