ಪುತ್ತೂರು: ಪುತ್ತೂರು ಉಪ ವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಕು.ಸ್ಟೆಲ್ಲಾ ವರ್ಗೀಸ್‌ರವರಿಗೆ, ಲಂಚ-ಭ್ರಷ್ಟಾಚಾರ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆಯಿಂದ ನಡೆಯುತ್ತಿರುವ ಆಂದೋಲನದ ಜಾಗೃತಿಯ ಫಲಕ ನೀಡಿ ಸ್ವಾಗತಿಸಲಾಯಿತು.
ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ ಕು.ಸ್ಟೆಲ್ಲಾ ವರ್ಗೀಸ್ ಅವರು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾವಣೆಗೊಂಡು ಆಗಮಿಸಿ ಫೆ.17ರಂದು ಅಧಿಕಾರ ಸ್ವೀಕರಿಸಿದ್ದರು. ಲಂಚ,ಭ್ರಷ್ಟಾಚಾರದ ವಿರುದ್ಧ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರ ಆಂದೋಲನ ನಡೆಯುತ್ತಿದೆ.ಲಂಚ, ಭ್ರಷ್ಟಾಚಾರ ನಿರ್ಮೂಲನೆಯೇ ದೊಡ್ಡ ಜನಸೇವೆ ಮತ್ತು ದೇಶಸೇವೆ, ಉತ್ತಮ ಸೇವೆಗೆ ಪುರಸ್ಕಾರ, ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಲಂಚ, ಭ್ರಷ್ಟಾಚಾರ ಮುಕ್ತ ಊರು, ತಾಲೂಕು, ರಾಜ್ಯ, ದೇಶ ನಮ್ಮದಾಗಲಿ ಎಂಬ ಆಶಯದೊಂದಿಗೆ ಆಂದೋಲನ ನಡೆಯುತ್ತಿದೆ ಎಂದು ನೂತನ ಎಸಿಯವರಿಗೆ ಮನವರಿಕೆ ಮಾಡಿಕೊಡಲಾಯಿತು.ಸುದ್ದಿ ಬಿಡುಗಡೆಯ ಹಿರಿಯ ವರದಿಗಾರ ಲೋಕೇಶ್ ಬನ್ನೂರು ಫಲಕ ನೀಡಿ ಸ್ವಾಗತಿಸಿದರು.ವರದಿಗಾರ ಯತೀಶ್ ಉಪ್ಪಳಿಗೆ ಉಪಸ್ಥಿತರಿದ್ದರು.