ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಗುರು ಸಂಜೀವಿನಿ ಒಕ್ಕೂಟದ ವತಿಯಿಂದ ಲಿಂಗತ್ವ ವೇದಿಕೆ ಸಮಿತಿಯನ್ನು ಕೊಳ್ತಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಚಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಸಂಜೀವಿನಿ ಒಕ್ಕೂಟದ ವಲಯ ವ್ಯವಸ್ಥಾಪಕಿ ನಳಿನಾಕ್ಷಿ ಅವರು ಲಿಂಗತ್ವ ವೇದಿಕೆಯ ಉದ್ದೇಶ ಮತ್ತು ಜವಾಬ್ದಾರಿಯ ಬಗ್ಗೆ ತಿಳಿಸಿದರು. ಚಿಗುರು ಸಂಜೀವಿನಿಯ ಅಧ್ಯಕ್ಷರು ನಳಿನಿ, ಕಾರ್ಯದರ್ಶಿ ಪೂರ್ಣಿಮಾ, ಶಾಲಾ ಮುಖ್ಯ ಗುರುಗಳು, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿ, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಬಿಟ್ ಪೊಲೀಸ್, ಗ್ರಾಂ ಪಂಚಾಯತ್ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಘನ ತ್ಯಾಜ್ಯಾ ಘಟಕ ಸಿಬ್ಬಂದಿಗಳು ಉಪಸ್ಥಿತರಿದ್ದರು.